This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

State News

ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ

ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯ : ಸಚಿವ ಪಾಟೀಲ್

ನಿಮ್ಮ ಸುದ್ದಿ ಬಾಗಲಕೋಟೆ

ಸಮುದಾಯಕ್ಕೆ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವ ಜನೋತ್ಸವದಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿದ್ದು, ಪ್ರತಿಭಾವಂತರು ತಮ್ಮ ಕೌಶಲ ಪ್ರದರ್ಶಿಸುವ ಮೂಲಕ ಜಿಲ್ಲೆ, ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತರುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ,ಸಿ, ಪಾಟೀಲ್ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಸರ್ವತೋಮುಖ ಬೆಳವಣಿಗೆಗೆ ಯುವ ಶಕ್ತಿಯ ಪಾತ್ರ ಬಹಳ ಮುಖ್ಯವಾಗಿದ್ದು, ದೇಶವನ್ನು ಉಳಿಸುವುದು ಅಂತೆಯೇ ಸದೃಢ ಭಾರತಕ್ಕಾಗಿ ಆರೋಗ್ಯವಂತ ಯುವಜನತೆಯು ನಿರ್ಮಾಣವಾಗಬೇಕಾಗಿದೆ ಎಂದರು.

ಪ್ರತಿಭಾ ಪ್ರದರ್ಶನಕ್ಕೆ ಇಂತಹ ಯುವಜನೋತ್ಸವ ಅವಕಾಶ ಬಳಸಿಕೊಂಡು ಸಾಧನೆ ಮಾಡಬೇಕು. ಉದಾಹರಣೆಗೆ ಒಬ್ಬ ಕುರಿಗಾಯಿ ತನ್ನ ವಿಶೇಷವಾದ ಗಾಯನದಿಂದ ದೊರೆತ ಅವಕಾಶಗಳನ್ನು ಬಳಸಿ ಗಾಯಕನಾದ. ಹಾಗೆ, ಯುವಜನರು ತಮ್ಮ ಇಚ್ಛೆ, ಆಸಕ್ತಿ ಇರುವ ವಿಭಾಗದಲ್ಲಿ ಪ್ರತಿಭಾ ಸಂಪನ್ನರಾಗಿ ಬೆಳೆಯಬೇಕು. ಅದಕ್ಕೆ ಇಲಾಖೆಯ ಸಹಕಾರ ಬೆಂಬಲ ಇರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕತೆ ವಹಿಸಿದ್ದ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ 50 ರಿಂದ 60 ಕೋಟಿಯಷ್ಟು ಯುವಜನರು ಇರುವ ದೇಶ ಇದ್ದರೇ ಅದು ಭಾರತ ಎಂದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯುವಜನರ ಮೇಲೆ ಅಪಾರ ಅಭಿಮಾನ, ಭರವಸೆ ಹೊಂದಿದ್ದಾರೆ. ಕೇವಲ ಪದವೀಧರ ಆದಗೇ ವೃತ್ತಿಪರ ಆಧಾರಿತ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕು ಸಾಗಿಸಬೇಕು ಎಂದು ತಿಳಿಸಿದರು.

ಮಾಜಿ ಎಂ.ಎಲ್.ಸಿ ನಾರಾಯಣಸಾ ಭಾಂಡಗೆ, ಜಿಲ್ಲಾಧಿಕಾರಿ ಪಿ.ಸುನಿಲಕುಮಾರ, ಜಿ.ಪಂ ಸಿಇಓ ಟಿ.ಭೂಬಾಲನ್, ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಗೂಡನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.