This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local NewsState News

*26 ರಿಂದ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ

*26 ರಿಂದ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ

ಬಾಗಲಕೋಟೆ:

ಸಂವಿಧಾನ ಜಾರಿಗೆ ಬಂದು 75ನೇ ವರ್ಷಾಚರಣೆ ಅಂಗವಾಗಿ ಜನವರಿ 26 ರಿಂದ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕುರಿತು ಮಂಗಳವಾರ ಜರುಗಿದ ವಿಡಿಯೋ ಸಂವಾದ ಸಭೆಯ ಬಳಿಕ ಮಾತನಾಡಿದ ಅವರು ಸಂವಿಧಾನದ ಮಹತ್ವ ಹಾಗೂ ರಾಷ್ಟ್ರೀಯ ಏಕತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಬುದ್ದ, ಬಸವ, ಅಂಬೇಡ್ಕರ ಹಾಗೂ ನಾರಾಯಣ ಗುರುಗಳ ಒಳಗೊಂಡ ಸ್ಥಬ್ದ ಚಿತ್ರಗಳೊಂದಿಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಾಗೃತಿ ಜಾಥಾ ಸಂಚರಿಸಲಿದೆ ಎಂದರು.

ಜನವರಿ 26 ರಂದು ಜರಗುವ ಸ್ಥಬ್ದಚಿತ್ರದ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ. ಸ್ಥಬ್ದಚಿತ್ರಗಳ ಮೆರವಣಿಗೆಗೆ ಜಿಲ್ಲಾ, ತಾಲೂಕಾ ಹಾಗೂ ಗ್ರಾಮ ಪಂಚಾಯತ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗುತ್ತಿದೆ. ಸಮಿತಿಯು ಸ್ಥಬ್ದಚಿತ್ರ ಮೆರವಣಿಗೆ ಮಾರ್ಗ ಅಂತಿಮಗೊಳಿಸಲಾಗುತ್ತಿದೆ. ಮೆರವಣಿಗೆಯಲ್ಲಿ ಸಾಂಸ್ಕøತಿ ಕಾರ್ಯಕ್ರಮ ಹಾಗೂ ಭಾರತದ ಸಂವಿಧಾನ ಪೀಠಿಕೆಯ ಮಾಹಿತಿಯುಳ್ಳ ಕರ ಪತ್ರಗಳನ್ನು ಮೆರವಣಿಗೆಯ ಉದ್ದಕ್ಕೂ ವಿತರಿಸಲು ಕ್ರಮವಹಿಸಲಾಗುತ್ತಿದೆ. ಮೆರವಣಿಗೆಯ ರಚನೆ ಮತ್ತು ಸಂಯೋಜನೆ, ಮಾರ್ಗ, ತಂಗುವಿಕೆ, ವಸತಿ, ವಿಶ್ರಾಂತಿ, ಸುರಕ್ಷತೆ ಇತ್ಯಾದಿಗಳನ್ನು ಜಿಲ್ಲಾ ಸಮಿತಿ ನೋಡಿಕೊಳ್ಳಲಿದೆ ಎಂದರು.

ಬುದ್ದ, ಬಸವ, ಅಂಬೇಡ್ಕರ ಹಾಗೂ ನಾರಾಯಣಗುರು ಒಳಗೊಂಡ ಸ್ಥಬ್ದಚಿತ್ರ ನಿರ್ಮಿಸಲು ಕ್ರಮಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಲಾಗಿದೆ. ಮೆರವಣಿಗೆ ಗ್ರಾಮಗಳ ಮೂಲಕ ಹಾದು ಹೋಗುವಾಗ ತಾಲೂಕಿನ ಗಡಿಯಲ್ಲಿ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಸಕರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸ್ವಾಗತಿಸುವ ವ್ಯವಸ್ಥೆ ಮಾಡಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಾಗೃತಿ ಜಾಥಾ ಆಗಮಿಸಿದಾಗ ಸ್ಥಳೀಯ ಕಲಾತಂಡಗಳ ಮೂಲಕ ಸ್ವಾಗತಿಸುವದರ ಜೊತೆಗೆ ಎಲ್ಲ ರೀತಿಯ ಬೆಂಬಲ ನೀಡುವ ಕೆಲಸವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಎನ್.ಜಿ.ಓ, ಸಂಘಟನೆಗಳು ಪಾಲ್ಗೊಳ್ಳುವಂತೆ ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯಿಂದ ಸ್ಥಬ್ದಚಿತ್ರ ಆಯ್ಕೆ ಮಾಡಬೇಕು. ಹೆಚ್ಚಿನ ಪ್ರಚಾರಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲು ತಿಳಿಸಿದ ಅವರು ತಾಲೂಕಾ, ನಗರ ಹಾಗೂ ಗ್ರಾಮ ಪಂಚಾಯತ ಮಟ್ಟದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನೃತ್ಯರೂಪಕ, ಸಂವಿಧಾನ ಮಹತ್ವ ಸಾರುವ ನಾಟಕ ಪ್ರದರ್ಶನಕ್ಕೆ ಮಕ್ಕಳನ್ನು ತಯಾರು ಮಾಡಲು ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶೀಧರ ಕುರೇರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಪುನಿತ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ನಂದಾ ಹಣಮರಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.*

ವಿದ್ಯಾರ್ಥಿ/ಸಾರ್ವಜನಿಕರಿಗೆ ಪ್ರಬಂಧ ಸ್ಪರ್ಧೆ*

ಜನವರಿ 26 ರಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಅಂಗವಾಗಿ ಬುದ್ದ, ಬಸವ, ಅಂಬೇಡ್ಕರ ಹಾಗೂ ನಾರಾಯಣ ಗುರುಗಳ ಚಿಂತನೆ ಮತ್ತು ಸಂವಿಧಾನ ವಿಷಯ ಕುರಿತು ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಪ್ರತಿ ತಾಲೂಕಾ ಮಟ್ಟದಲ್ಲಿ ಪ್ರೌಢ, ಪದವಿ ಪೂರ್ವ, ಪದವಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಪ್ರತಿ ತಾಲೂಕಿಗೆ 3 ಉತ್ತಮ ಪ್ರಬಂಧಗಳನ್ನು ಆಯ್ಕೆ ಮಾಡಿ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಆಯಾ ತಾಲೂಕಾ ಮಟ್ಟದಲ್ಲಿಯೇ ಪ್ರಶಸ್ತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

Nimma Suddi
";