ಬಾಗಲಕೋಟೆ
ಶಾಸಕ ಎಚ್.ವಾಯ್.ಮೇಟಿ, ಜಿಲ್ಲಾಧಿಕಾರಿಗಳಾದ ಕೆ.ಎಂ.ಜಾನಕಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಾಲ ಮಂದಿರದ ಮಕ್ಕಳ ಜೊತೆ ದೀಪಾವಳಿ ಹಬ್ಬದ ಆಚರಣೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಮಕ್ಕಳೊಂದಿಗೆ ದೀಪಗಳನ್ನು ಬೆಳಗಿಸುವ ಮೂಲಕ ಮಕ್ಕಳಿಗೆ ದೀಪಾವಳಿಯ ಶುಭಾಶಯ ತಿಳಿಸಿದರು. ವಿವೇಕ ಶಾಲೆ ಯೋಜನೆಯಡಿ ನಿರ್ಮಾಣಗೊಂಡ ಎರಡು ಶಾಲಾ ಕೊಠಡಿಗಳನ್ನು ಉದ್ಘಾಟನೆ ಮಾಡಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರ ಪ್ರಶಸ್ತಿ ಹಾಗೂ ನೆನಪಿನ ಕಾಣಿಕೆ ನೀಡಿದರು.
ಬಾಲ ಮಂದಿರದ ಮಕ್ಕಳು ಕ್ರೀಡೆ, ಸಂಗೀತ, ಕರಾಟೆ ಇನ್ನಿತರೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲಾ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಮಕ್ಕಳು ಹಾಡು, ನೃತ್ಯ, ಸಂಗೀತದ ಮೂಲಕ ಸಂಭ್ರಮಿಸಿದರು, ಗಣ್ಯರು ಮಕ್ಕಳ ಸಂಭ್ರಮವನ್ನು ಕಣ್ತುಂಬಿಕೊಂಡರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅಮರೇಶ್ ಹಾವಿನ್ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಬಾಗಲಕೋಟೆ, ಕಾರ್ಯ ನಿರ್ವಾಹಕ ಅಧಿಕಾರಿಗಳು ಬಾಗಲಕೋಟೆ, ಸಂಸ್ಥೆಯ ಅಧೀಕ್ಷಕರಾದ ದಸ್ತಗೀರ ಸಾಬ್ ಮುಲ್ಲಾ, ಹಾಗೂ ಜಯಮಾಲಾ ದೊಡ್ಡಮನಿ, ಶಾಲೆಯ ಮುಖ್ಯ ಶಿಕ್ಷಕರಾದ ನಾಗರಾಳ ಹಾಗೂ ಸಿಬ್ಬಂದಿಗಳು ಹಾಜರಿದ್ದರು.