ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ಹೆಚ್ಚಾಗುತ್ತಿದ್ದು, ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿ ಪ್ರಚಾರಗಳನ್ನು ಆರಂಭಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಈ ನಡುವೆ ಬಿಜೆಪಿ ಹೈಕಮಾಂಡ್ ನಾಯಕರು ಕರ್ನಾಟಕದಲ್ಲಿ ಅಖಾಡಕ್ಕಿಳಿಯಲು ಮುಂದಾಗಿದ್ದು, ಡಿಕೆ ಬ್ರದರ್ಸ್ ಕೋಟೆ ಭೇದಿಸಲು ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದಲೇ ಪ್ರಚಾರ ಆರಂಭಿಸಲಿದ್ದು, ಈ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಮೋರ್ ಸ್ಟ್ರಾಂಗ್ ಮೋರ್ ಎನಿಮಿಸ್, ಮೋರ್ ಸ್ಟ್ರಾಂಗ್ ಮೋರ್ ಪವರ್ ಎಂದು ಹೇಳಿದ್ದು, ಅಮಿತ್ ಶಾ ಆದರೂ ಬರಲಿ ಪ್ರಧಾನಿ ಮೋದಿ ಆದರೂ ಬರಲಿ. ನಮಗೆ ಇದೆಲ್ಲಾ ಹೊಸದು ಅಲ್ಲ ಎಂದಿದ್ದು, ರಾಜ್ಯದಲ್ಲಿ ಎಲ್ಲಾ 28 ಕ್ಷೇತ್ರಗಳನ್ನು ಗೆದ್ದುಕೊಳ್ಳುವ ಮೂಲಕ ಆಡಳಿತರೂಢ ಪಕ್ಷ ಕಾಂಗ್ರೆಸ್ಗೆ ಸೆಡ್ಡು ಹೊಡೆಯಲು ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಇನ್ನೊಂದೆಡೆ, ಕಾಂಗ್ರೆಸ್ ಕೂಡ ಕನಿಷ್ಠ 20 ಕ್ಷೇತ್ರಗಳನ್ನು ಗೆದ್ದುಕೊಳ್ಳಲು ರಣತಂತ್ರ ರೂಪಿಸುತ್ತಿದೆ.
ಈ ನಡುವೆ ರಾಜ್ಯದಲ್ಲಿ ಅಬ್ಬರದ ಪ್ರಚಾರ ಆರಂಭಗೊಂಡಿದ್ದು, ಬಿಜೆಪಿ ಹೈಕಮಾಂಡ್ ಘಟಾನುಘಟಿ ನಾಯಕರನ್ನು ಪ್ರಚಾರದ ಅಖಾಡಕ್ಕಿಳಿಸಲು ಮುಂದಾಗಿದ್ದು, ಹೆಚ್ಡಿ ದೇವೇಗೌಡ ಅವರನ್ನು ಎದುರಿಸಿದ್ದೇವೆ, ಗೌಡರ ಮಗ ಹೆಚ್ಡಿ ಕುಮಾರಸ್ವಾಮಿ ಅವರನ್ನ ಎದರಿಸಿದ್ದೇವೆ. ಗೌಡರ ಮೊಮ್ಮಗನನ್ನು ಎದುರಿಸಿದ್ದೇವೆ, ಸೊಸೆಯನ್ನೂ ಎದುರಿಸಿದ್ದೇವೆ. ಈಗ ಗೌಡರ ಅಳಿಯನನ್ನ ಎದುರಿಸುತ್ತೇವೆ ಎಂದರು.
ಕೋವಿಡ್ ಸಂದರ್ಭದಲ್ಲಿ ಹೆಣ ಹೊತ್ತರು, ಮಣ್ಣ ಮಾಡಿದವರು ಯಾರು ಇಲ್ಲ. ಈಗ ಮಾತಾಡುವವರು ಕೋವಿಡ್ನಲ್ಲಿ ಎಲ್ಲಿ ಹೋಗಿದ್ದರು? ಆಹಾರದ ಕಿಟ್, ಔಷದಿ ಕೊಡುವಾಗ ಯಾರು ಇರಲಿಲ್ಲ. ಆಗ ಕ್ಷೇತ್ರದಲ್ಲಿ ಇದ್ದದ್ದು ಕಾಂಗ್ರೆಸ್ ಮತ್ತು ಡಿಕೆ ಸುರೇಶ್ ಮಾತ್ರ ಎಂದರು.