This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

National NewsPolitics NewsState News

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ಭವಿಷ್ಯ ನಿಜವಾಗಿದ್ದು, ಎಕ್ಸಿಟ್ ಪೋಲ್ ಎಲ್ಲಾ ಸುಳ್ಳಾಗಿತ್ತು. – ಡಿಕೆ ಶಿವಕುಮಾರ್

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ಭವಿಷ್ಯ ನಿಜವಾಗಿದ್ದು, ಎಕ್ಸಿಟ್ ಪೋಲ್ ಎಲ್ಲಾ ಸುಳ್ಳಾಗಿತ್ತು. – ಡಿಕೆ ಶಿವಕುಮಾರ್

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನ ಭವಿಷ್ಯ ನಿಜವಾಗಿದ್ದು, ಎಕ್ಸಿಟ್ ಪೋಲ್ ಎಲ್ಲಾ ಸುಳ್ಳಾಗಿತ್ತು. ಅದೇ ರೀತಿ ಲೋಕಸಭಾ ಚುನಾವಣೆಯಲ್ಲಿಯೂ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು,ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ. ಹೀಗಾಗಿ, ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ದಾಟಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜನತೆಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ನಂಬಿಕೆ ಬಂದಿದೆ. ಇವು ನಮ್ಮ ಕೈ ಹಿಡಿಯಲಿವೆ. ಮೊದಲ ಹಂತದ ಚುನಾವಣೆಗಿಂತ ಎರಡನೇ ಹಂತದ ಚುನಾವಣೆಯಲ್ಲಿ ಎಐಸಿಸಿ ನೀಡಿದ ಗ್ಯಾರಂಟಿಗಳ ಜನರನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಿವೆ. ಗ್ಯಾರಂಟಿಗಳು ದೇಶದ ಜನರ ಮನಸ್ಸು ಗೆದ್ದಿವೆ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ರಿಂದ 85 ಸ್ಥಾನ ಮಾತ್ರ ಕೊಟ್ಟಿದ್ದರು. 136 ಸ್ಥಾನ ಗೆಲ್ಲುತ್ತೇವೆ ಎಂದು ನನ್ನ ರಾಜಕೀಯ ಅನುಭವದ ಮೇಲೆ ಹೇಳಿದ್ದೆ. ಜೊತೆಗೆ ನಾನು ನಡೆಸಿದ್ದ ಖಾಸಗಿ ಸಮೀಕ್ಷೆ ಪ್ರಕಾರದಂತೆ ಜನ ನಮಗೆ 136 ಸ್ಥಾನ ನೀಡಿದರು.

ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು. ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ ಎಂದರು.

Nimma Suddi
";