This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

National News

ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕೆಲಸವಲ್ಲವೇ? – ಡಿಕೆ ಶಿವಕುಮಾರ್‌

ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕೆಲಸವಲ್ಲವೇ? – ಡಿಕೆ ಶಿವಕುಮಾರ್‌

ನವದೆಹಲಿ: ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯ ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ ಆ ಸರ್ಕಾರ ಏಕಿರಬೇಕು? ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್ ಮೈದಾನದಲ್ಲಿ ಬುಧವಾರ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

“ರಾಜ್ಯಕ್ಕೆ ಅನುದಾನ ನೀಡುವ ಅಧಿಕಾರ ಹಣ ಕಾಸು ಆಯೋಗದ ಮುಂದೆ ಇದೆ. ಕೇಂದ್ರ ಸರ್ಕಾರದ ಕೈಯಲ್ಲಿಲ್ಲ ಎಂದು ಶ್ರೀಮತಿ ನಿರ್ಮಲಾ ಸೀತರಾಮನ್ ಅವರು ಹೇಳಿದ್ದು, ನಿಮ್ಮ ಬಳಿ ಅಧಿಕಾರವೇ ಇಲ್ಲವಾದರೆ ಸರ್ಕಾರ ಯಾಕಿರಬೇಕು? ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕೆಲಸವಲ್ಲವೇ? ” ಎಂದು ಪ್ರಶ್ನಿಸಿದರು.

ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಮನುಷ್ಯ ಹುಟ್ಟಿದ ನಂತರ ಏನಾದರೂ ಸಾಕ್ಷಿಗುಡ್ಡೆ ಬಿಟ್ಟು ಹೋಗಬೇಕಿದ್ದು, ಈ ಹೋರಾಟ ಮುಂದಿನ ಪೀಳಿಗೆಗೆ ಒಂದು ಸಾಕ್ಷಿಗುಡ್ಡೆಯಾಗಲಿದೆ. ಇಲ್ಲಿ ನಾನು ಹಾಗೂ ಮುಖ್ಯಮಂತ್ರಿ ಮಾತ್ರ ಬಂದು ಕೂತಿಲ್ಲ. ನಮ್ಮ ರಾಜ್ಯದ ಜನತೆ ಆರಿಸಿರುವ 138 ಶಾಸಕರು, ಪರಿಷತ್ ಸದಸ್ಯರು ಇಲ್ಲಿಗೆ ಬಂದು ರಾಜ್ಯದ ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಸೂಚಿಸಿದರು.

Nimma Suddi
";