ದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸುಬಹುದಾದ ಅಭ್ಯರ್ಥಿಗಳ ವಿಷಯದಲ್ಲಿ ರಾಷ್ಟ್ರದ ರಾಜಧಾನಿಯಲ್ಲಿ ಎಐಸಿಸಿ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಗ ಯತೀಂದ್ರ ಸಿದ್ದರಾಮಯ್ಯಗೆ ಮೈಸೂರು ಟಿಕೆಟ್ ಸಿಗಲಿದೆಯಾ ಅಂತ ಕೇಳಿದ ಪ್ರಶ್ನೆಗೆ, ಮೈಸೂರು ಕ್ಷೇತ್ರದ ಬಗ್ಗೆ ಚರ್ಚೆಯಾಗಿಲ್ಲ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹಾದೇವಪ್ಪ ದಲಿತ ಮುಖ್ಯಮಂತ್ರಿ ವಿಷಯವನ್ನು ಪ್ರಸ್ತಾಪಿಸಿರುವ ಅಂಶ ಪ್ರಸ್ತಾಪಿಸಿದಾಗ ಶಿವಕುಮಾರ್, ಆದಸೆ ಪಡೋದ್ರಲ್ಲಿ ತಪ್ಪಿಲ್ಲ, ಇನ್ನೂ ಹಲವಾರು ಜನ ಮುಖ್ಯಮಂತ್ರಿಯಾಗುವ ಆಸೆ ಇಟ್ಟುಕೊಂಡಿದ್ದಾರೆ ಎಂದು ವಿವರಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸ್ಪರ್ಧೆ ಬಗ್ಗೆ ಬೆಳಕು ಚೆಲ್ಲಿದ ಶಿವಕುಮಾರ್, ಕಲಬುರಗಿ ಕ್ಷೇತ್ರದಿಂದ ಕೇವಲ ಅವರ ಹೆಸರ ಮಾತ್ರ ಪ್ರಸ್ತಾಪವಾಗಿದೆ, ಆದರೆ ಅವರ ವಯಸ್ಸನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತದೆ ಮತ್ತು ಅವರು ಪಾರ್ಟಿ ಅಧ್ಯಕ್ಷರಾಗಿರುವುದರಿಂದ ಚುನಾವಣೆ ಸಮಯದಲ್ಲಿ ದೇಶದಾದ್ಯಂತ ಸುತ್ತಾಡಬೇಕಾಗುತ್ತದೆ ಎಂದು ಸೂಚಿಸಿದರು.