This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ಬರೀ ಬಂದು ಹೋಗುವ ಅತಿಥಿಗಳಿಗೆ ಪಾಠ ಕಲಿಸಬೇಕು: ಡಿಕೆ ಸುರೇಶ್‌

ಬರೀ ಬಂದು ಹೋಗುವ ಅತಿಥಿಗಳಿಗೆ ಪಾಠ ಕಲಿಸಬೇಕು: ಡಿಕೆ ಸುರೇಶ್‌

ಹಾರೋಹಳ್ಳಿ : ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಮತ್ತು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ರೀತಿ ನಾವು ನೆಂಟರಂತೆ ಬಂದು ಹೋಗುವವರಲ್ಲ. ಈ ಭಾಗದಲ್ಲಿಏನಾದರೂ ನಾವು ಮಾಡಬೇಕು, ನಿಮ್ಮ ಜತೆ ನಾವಿರಬೇಕು ಎಂದು ಹಗಲಿರುಳು ಶ್ರಮಿಸುತ್ತಿದ್ದೇವೆ. ಬರೀ ಬಂದು ಹೋಗುವ ಅತಿಥಿಗಳಿಗೆ ಪಾಠ ಕಲಿಸಬೇಕು ಎಂದು ಸಂಸದ ಡಿ ಕೆ ಸುರೇಶ್‌ ಕರೆ ನೀಡಿದರು.

ತಾಲೂಕಿನ ದೊಡ್ಡ ಮುದುವಾಡಿ ಗ್ರಾಪಂ ವ್ಯಾಪ್ತಿಯ ದಿಂಬದಹಳ್ಳಿ-ಗಾನಾಳು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕಾವೇರಿ ಕುಡಿಯುವ ನೀರಿನ ಯೋಜನೆಗಾಗಿ 300 ಕೋಟಿ ರೂ. ಹಣ ಬಿಡುಗಡೆಯಾಗಿದ್ದು, ಶೀಘ್ರ ಟೆಂಡರ್‌ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದರು.

ಈ ಭಾಗದಲ್ಲಿ ಕಳೆದ 40 ವರ್ಷಗಳಿಂದ ರಾಜಕೀಯ ಮಾಡಿರುವವರು ಹಾಗೂ ಎಲ್ಲಾ ಹುದ್ದೆಗಳನ್ನು ಅನುಭವಿಸಿರುವವರು ಯಾವುದೇ ಕೆಲಸ ಮಾಡಿಲ್ಲ ಎಂದು ಪರೋಕ್ಷವಾಗಿ ಎಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

Nimma Suddi
";