This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

Education NewsState News

೨೦೨೧ರ ವೈದ್ಯ ಪ್ರಶಸ್ತಿಗೆ ಡಾ.ಆಶಾಲತಾ ಮಲ್ಲಾಪೂರ

ನಿಮ್ಮ ಸುದ್ದಿ ಬಾಗಲಕೋಟೆ

ನಗರದ ಬವಿವ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯ ಸ್ತಿçÃರೋಗ ವಿಭಾಗದ ಮುಖ್ಯಸ್ಥೆ ಡಾ.ಆಶಾಲತಾ ಮಲ್ಲಾಪೂರ ಅವರು ವೈದ್ಯಕೀಯ ಕ್ಷೇತ್ರದಲ್ಲಿನ ಗಣನೀಯ ಸೇವೆಗಾಗಿ ರಾಜ್ಯಮಟ್ಟದ ಪುರಸ್ಕಾರ ಲಭಿಸಿದೆ.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆ ನೀಡುವ ೨೦೨೧ರ ಸಾಲಿನ ವೈದ್ಯ ಪ್ರಶಸ್ತಿಗೆ ಭಾಜನರಾಗಿದ್ದು ಜು.೧ರಂದು ಬೆಂಗಳೂರಿನ ಡಾ.ನರಸಿಂಹಾಚಾರ್ಯ ಸಭಾ ಭವನದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವೈದ್ಯಕೀಯ ವಿಜ್ಞಾನದ ಸುರಕ್ಷಿತ ತಾಯ್ತನ ವಿಷಯದಲ್ಲಿ ಅಪಾರ ಸಂಶೋಧನಾ ಅನುಭವ ಹೊಂದಿರುವ ಮತ್ತು ಸಂಶೋಧನಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡಾ.ಆಶಾಲತಾ ಮಲ್ಲಾಪೂರ ಅವರಿಗೆ ಈ ಗೌರವ ಸಂದಿರುವುದು ಅಭಿಮಾನದ ಸಂಗತಿ ಎಂದು ಬವಿವ ಸಂಘದ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ವೀರಣ್ಣ ಚರಂತಿಮಠ ಅಭಿನಂದಿಸಿರುವರು.

ಈ ಸಂದರ್ಭದಲ್ಲಿ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ, ಪ್ರಾಚಾರ್ಯ ಡಾ.ಅಶೋಕ ಮಲ್ಲಾಪೂರ, ವೈದ್ಯಕೀಯ ಅಧೀಕ್ಷಕಿ ಡಾ.ಭುವನೇಶ್ವರಿ ಯಳಮಲಿ ಇದ್ದರು.