This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಚಾಲನೆ

ರೈತರಿಗೆ ವರದಾನವಾದ ಯೋಜನೆ : ಸಿ.ಸಿ.ಪಾಟೀಲ

ನಿಮ್ಮ ಸುದ್ದಿ ಬಾಗಲಕೋಟೆ

ಕಂದಾಯ ಇಲಾಖೆಯ ದಾಖಲೆಗಳಾದ ಪಹಣ, ಅಟ್ಲಾಸ್, ಆದಾ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಸರಕಾರ ಮಹತ್ವದ ಯೋಜನೆ ರೈತರಿಗೆ ವರದಾನವಾಗಿ ಪರಿಣಮಿಸಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ಹೇಳಿದರು.

ತಾಲೂಕಿನ ಹೊನ್ನಾಕಟ್ಟಿ ಗ್ರಾಮದ ಆಂಜನೇಯ ದೇವಸ್ಥಾನದ ಅರಳಿಕಟ್ಟಿಯಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ತಾಲೂಕಾ ಆಡಳಿತ ಸಹಯೋಗದಲ್ಲಿ ಹಮ್ಮಿಕೊಂಡ ಕಂದಾಯ ದಾಖಲೆಗಳು ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಾಂಕೇತಿಕವಾಗಿ ದಾಖಲೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದ ಅವರು ರೈತರ ಅಲೆದಾಟ, ಸಮಯ ಹಾಗೂ ಹಣ ವ್ಯರ್ತವಾಗುವದನ್ನು ತಪ್ಪಿಸುವ ನಿಟ್ಟಿನಲ್ಲಿ ಉಪಯುಕ್ತವಾದ ಕಂದಾಯ ದಾಖಲೆಗಳನ್ನು ತಲುಪಿಸುವ ಮಹತ್ವದ ಕಾರ್ಯವನ್ನು ಸರಕಾರ ಕೈಗೊಂಡಿದೆ ಎಂದರು.

ಈ ಹಿಂದೆ ರೈತರು ಇನಾಮದಾರಿಕೆಯಿಂದ ಜಮೀನು ಖರೀದಿಸಿಕೊಂಡು ಉಳಿಮೆ ಮಾಡುತ್ತಿರುವಾಗ ಅಂತಹ ಜಮೀನು ಮಾರಾಟ ಮಾಡಲು, ಉಪಬೋಗಿಸಲು ಬರುತ್ತಿರಲಿಲ್ಲ. ಮೂಲ ಮಾಲಿಕನ ಹೆಸರು ಕಡಿಮೆಯಾಗದೇ ರೈತರು ಇಂತಹ ಜಮೀನು ಮಾರಲು ಹಾಗೂ ಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ರೈತರು ತೊಂದರೆ ಅನುಭವಿಸುವಂತಾಗಿತ್ತು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವದರಿಂದ ದಾಖಲೆಯಲ್ಲಿನ ತಿದ್ದುಪಡಿಗೆ ಅನುಕೂಲವಾಗಲಿದೆ ಎಂದರು.

ಸAಸದ ಪಿ.ಸಿ.ಗದ್ದಿಗೌಡರ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇಂತಯ ಉಪಯುಕ್ತ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗಳನ್ನು ತಪ್ಪಿಸಿ ನೇರವಾಗಿ ಕಂದಾಯ ದಾಖಲೆಗಳನ್ನು ರೈತರ ಮನೆ ತಲುಪಿಸುವ ಉದ್ದೇಶದಿಂದ ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಕಾನೂನುಗಳನ್ನು ತಿದ್ದುಪಡಿಗೊಳಿಸಿ ಸರಳೀಕರಣಗೊಳಿಸಿದ್ದಾರೆ. ಇದರಿಂದ ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಿಕೊಳ್ಳಯವದರ ಜೊತೆಗೆ ನೇರವಾಗಿ ರೈತರ ಖಾತೆಗೆ ನೇರವಾಗಿ ಹಣ ಸಂದಾಯ ಮಾಡುವಂತೆ ಯೋಜನೆ ಜಾರಿಗೊಳಿಸಿರುವುದಾಗಿ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾತನಾಡಿ ೧೯೬೨ರಲ್ಲಿ ಭೂಮಿ ಪರಿವರ್ತನ ಕಾನೂನು ಇದ್ದರೂ ಕೂಡಾ ದಾಖಲೆಗಳು ಅಂದೇ ಸೃಷ್ಟಿಯಾಗಿದ್ದವು. ಆದರೆ ರೈತರಿಗೆ ಒದಗಿಸಬೇಕಾದ ಈ ದಾಖಲೆಗಳನ್ನು ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಸರಿಯಾಗಿ ದೊರಕಿಸಿ ಕೊಡದೇ ಇರುವುದರಿಂದ ಈ ಯೋಜನೆ ರೈತರಿಗೆ ಉಪಯುಕ್ತವಾಗಿದ್ದು, ಇದರ ಪ್ರಯೋಜನೆ ಪಡೆದುಕೊಳ್ಳಬೇಕು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ ಸರಕಾರ ನೀಡಿದ ದಾಖಲೆಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವದನ್ನು ರೂಢಿ ಮಾಡಿಕೊಳ್ಳಬೇಕು. ದಾಖಲೆಗಳಲ್ಲಿ ಏನಾದರೂ ಬದಲಾವಣೆ ಕಂಡುಬAದಲ್ಲಿ ಇದೇ ಮಾರ್ಚ ೨೧ ರಿಂದ ೬ ದಿನಗಳ ಕಾಲ ದಾಖಲೆಗಳ ತಿದ್ದುಪಡಿ ಕಾರ್ಯವನ್ನು ನಾಡಕಚೇರಿಗಳಲ್ಲಿ ಮಾಡಿಕೊಡಲಾಗುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು. ಕಾರ್ಯಕ್ರಮದ ನಂತರ ಜಿಲ್ಲಾ ಉಸ್ತುವಾರ ಸಚಿವ ಸಿ.ಸಿ.ಪಾಟೀಲ ಸಾಂಕೇತಿಕವಾಗಿ ರೈತರ ಮನೆಗಳಿಗೆ ಕಂದಾಯ ದಾಖಲೆಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ಸುತಗುಂಡಾರ ಗ್ರಾ.ಪಂ ಅಧ್ಯಕ್ಷ ಮಳೆಯಪ್ಪ ಮೇಟಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ ಉಪಕಾರ್ಯದರ್ಶಿ ಸಿದ್ರಾಮೇಶ್ವರ ಉಕ್ಕಲಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕಾರ, ಜಿ.ಪಂ ಯೋಜನಾ ನಿರ್ದೇಶಕ ಎಂ.ವಿ.ಚಳಗೇರಿ, ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಶೇರಿದಂತೆ ಇತರರು ಉಪಸ್ಥಿತರಿದ್ದರು.

";