This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಪಲ್ಸ್ ಪೋಲಿಯೊಗೆ ಚಾಲನೆ

ನಿಮ್ಮ ಸುದ್ದಿ ಬಾಗಲಕೋಟೆ

ರಾಷ್ಟ್ರೀಯ ಪಲ್ಸ್ ಪೋಲಿಯೊ ದಿನದ ಅಂಗವಾಗಿ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಮೂಲಕ ಚಾಲನೆ ನೀಡಲಾಯಿತು.

ಪಟ್ಟಣದ ವಾರ್ಡ್ 9 ರಲ್ಲಿ ಪಟ್ಟಣ ಪಂಚಾಯಿತಿ ನೂತನ ಸದಸ್ಯ, ಕರದಂಟು ಉದ್ಯಮಿ ಸಂತೋಷ ಐಹೊಳ್ಳಿ ಮಗುವಿಗೆ ಪೋಲಿಯೊ ಹನಿ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೊ ಹನಿ ಹಾಕಿಸುವುದು ಕಡ್ಡಾಯವಾಗಿದೆ. ಫೆ.27 ರಿಂದ ಅಭಿಯಾನ ಆರಂಭವಾಗಿದ್ದು ಉಚಿತವಾಗಿ ಹನಿ ಹಾಕಲಾಗುತ್ತಿದೆ ಎಂದರು.

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

Nimma Suddi
";