This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಬರ ಪರಿಹಾರ-ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಸಿಎಂ ಸಿದ್ದು

ಬರ ಪರಿಹಾರ-ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಸಿಎಂ ಸಿದ್ದು

ನ್ಯಾಯ ಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರ ಪರಿಹಾರ ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಸೋಮವಾರ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರ ಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ. ಇದು ಖಂಡನೀಯ ಎಂದು ಸಿದ್ದರಾಮಯ್ಯ ತಿಳಿಸಿದರು.

ಬರ ಪರಿಹಾರಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ಸಂಪರ್ಕಿಸಬಹುದಿತ್ತು. ಈ ಅರ್ಜಿ ಸಲ್ಲಿಸಿರುವ ಸಮಯದ ಮಹತ್ವ ನಮಗೆ ಅರ್ಥವಾಗುತ್ತದೆ. ಈ ಅರ್ಜಿಗೆ ಪ್ರತಿಕ್ರಿಯೆ ಕೋರಿ ನಮಗೆ ನೋಟೀಸ್ ನೀಡಬಾರದು. ಹಾಗೆ ಮಾಡಿದರೆ ಅದು ಸುದ್ದಿಯಾಗುತ್ತದೆ’ ಎಂದು ಅಡ್ವೋಕೇಟ್ ಜನರಲ್ ಅವರು ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ನಮ್ಮ ಉಪ ಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದರು. ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹ ಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇದೀಗ ಇದೇ ಸುಳ್ಳನ್ನು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.

ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾನು ಮತ್ತೆ ಮತ್ತೆ ಹೇಳಿರುವಂತೆ ‘ಬರಗಾಲಕ್ಕೆ ಪರಿಹಾರ ಕೋರಿ ನಮ್ಮ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು ಎಂದು ಸಿದ್ದು ಮಾಹಿತಿ ನೀಡಿದರು.

 

";