*ಹಿರಿಯ ನಾಗರಿಕರಿಗೆ ಕ್ರೀಡೆ, ಸಾಂಸ್ಕøತಿಕ ಕಾರ್ಯಕ್ರಮ*
*ಕ್ರೀಡೆಯಿಂದ ಉತ್ಸಾಹ ಜೀವನ ಸಾದ್ಯ : ನ್ಯಾ.ದಿಡ್ಡಿ*
———————————————
ಬಾಗಲಕೋಟೆ:
ಪ್ರತಿಯೊಬ್ಬ ಮನುಷ್ಯನ ಶರೀರಕ್ಕೆ ಮಾತ್ರ ಮುಪ್ಪಾವಸ್ಥೆ ಬರುತ್ತದೆ. ಆದರೆ ಮನಸ್ಸಿಗೆ ಅಲ್ಲ. ಇದನ್ನರಿತು ಕ್ರೀಡೆಯಲ್ಲಿ ಭಾಗವಹಿಸುವದರಿಂದ ಉತ್ಸಾಹ ಜೀವನ ಸಾಗಿಸಲು ಸಾಧ್ಯವೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಹೇಳಿದರು.
ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಹಮ್ಮಿಕೊಂಡ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜನ ಕಲ್ಯಾಣ ಹಾಗೂ ಆರೋಗ್ಯ ವೃದ್ದಿಗಾಗಿ ಸರಕಾರ ಆದೇಶದ ಮೇರೆಗೆ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಹಿರಿಯರಾಗಲಿ, ಕಿರಿಯರಾಗಲಿ ಕ್ರೀಡೆಯಲ್ಲಿ ಭಾಗವಹಿಸಿ ದೀರ್ಘಾಯುಶಿಗಳಾಗಿ ಆರೋಗ್ಯವಂತ ಜೀವನ ನಡೆಸಬೇಕು ಎಂದರು.
ಇಂದು ಹಿರಿಯರಿಗೆ ಕ್ರೀಡೆ ಅವಶ್ಯವಾಗಿದ್ದು, ಮನೆಯಲ್ಲಿಯ ಗ್ರಾಮಗಳಲ್ಲಿಯ, ಕಚೇರಿಗಳಲ್ಲಿ ಕಾರ್ಯನಿರ್ವಹಿಸಿ ಒತ್ತಡದ ಜೀವನ ನಿರಾವರಣೆಗೆ ಕ್ರೀಡೆ ಅವಶ್ಯವಾಗಿದ್ದು, ಕಿರಿಯರಲ್ಲದೇ ಹಿರಿಯರಿಗಾಗಿಯೇ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕ್ರೀಡೆಯಿಂದ ದೈಹಿಕ, ಮಾನಸಿಕ ಹಾಗೂ ಸಾಮಾಜಿಕವಾಗಿ ಮುಂದೆ ಬರಲು ಸಾಧ್ಯವಾಗಲಿದ್ದು, ಹಿರಿಯರೆಂಬ ಸಂಕುಚಿತ ಭಾವನೆ ಹೊರಗಿಟ್ಟು ಎಲ್ಲರೂ ಮುಕ್ತವಾಗಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ಮಹಾಂತೇಶ, ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ, ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿ ಸಿದ್ದಲಿಂಗಪ್ಪ ಗೋಳದ ಸೇರಿದಂತೆ ಇತರರು ಉಪಸ್ಥಿತರಿದ್ದರು.