This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

Politics News

ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ:ಸಚಿವ ಈಶ್ವರಪ್ಪ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ ಜಲ ಜೀವನ ಮೀಷನ್‍ದಡಿ ಕೈಗೊಂಡ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಮನೆ ಮನೆಗೆ ನಲ್ಲಿ ನೀರು ಪೂರೈಸುವ ಕೆಲಸವಾಗಬೇಕೆಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಜರುಗಿದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಈಗಾಗಲೇ ಜಲ ಜೀವನ ಮಿಷನ್‍ದಡಿ ಕಳೆದ ಸಾಲಿನಲ್ಲಿ 337 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, 295 ಪೂರ್ಣಗೊಂಡಿದ್ದು, 42 ಬಾಕಿ ಉಳಿದಿರುತ್ತವೆ. ಬಾಕಿ ಕಾಮಗಾರಿಗಳ ಮೇಲೆ ಗಮನ ಹರಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ತಿಳಿಸಿದರು. ಪೈಪ್‍ಗಳನ್ನು 3 ಅಡಿಯಷ್ಟು ಒಳಗಡೆ ಹಾಕಲು ಕ್ರಮವಹಿಸಲು ತಿಳಿಸಿದರು.

ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳಿಗೆ ನಿಗದಿಪಡಿಸಿದ 182.04 ಕೋಟಿ ರೂ.ಗಳ ಪೈಕಿ ಕೇವಲ 89.97 ಕೋಟಿ ರೂ.ಗಳ ಮಾತ್ರ ಖರ್ಚು ಮಾಡಲಾಗಿದೆ. ಆದ್ದರಿಂದ ಈಗಾಗಲೇ ಪೂರ್ಣಗೊಂಡ ಕಾಮಗಾರಿಗಳ ಬಿಲ್ ಪಾವತಿಗೆ ಕ್ರಮವಹಿಸಬೇಕು. ಇಲ್ಲದಿದ್ದರೆ ಬಾಕಿ ಕಾಮಗಾರಿ ಪ್ರಾರಂಭಿಸಲು ಗುತ್ತಿಗೆದಾರರಿಗೆ ಸಾಧ್ಯವಾಗುವದಿಲ್ಲ. ಇದನ್ನು ಗಮನದಲ್ಲಿಟ್ಟಿಕೊಂಡು ಬಿಲ್ ಪಾವತಿಯಾದಲ್ಲಿ ಮುಂದಿನ ಹಂತದ ಹಣ ಬಿಡುಗಡೆಗೆ ಮಾಡಲು ಸಾಧ್ಯವಾಗುತ್ತದೆ. ಪ್ರಸಕ್ತ ಸಾಲಿನಲ್ಲಿ 78 ಕಾಮಗಾರಿ ಕೈಗೊಂಡಿದ್ದು, ಅದರಲ್ಲಿ 36 ಪ್ರಗತಿಯಲ್ಲಿವೆ. ಬರುವ ಆಗಸ್ಟ ಮಾಹೆಯಲ್ಲಿ ಪೂರ್ಣಗೊಳಿಸಲು ಸೂಚಿಸಿದರು. ಬಾಕಿ ಕಾಮಗಾರಿಗಳ ಬಗ್ಗೆ ತಾಲೂಕಾವಾರು ಮಾಹಿತಿ ಪಡೆದುಕೊಂಡರು.

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ವೈಯಕ್ತಿಕ ಶೌಚಾಲಯಗಳ ನಿರ್ಮಾಣದ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು ಜಿಲ್ಲೆಯಲ್ಲಿ ಶೇ.74.45 ರಷ್ಟು ಮಾತ್ರ ಪ್ರಗತಿ ಸಾಧಿಸಿದ್ದು, ಶೌಚಾಲಯ ಕಟ್ಟಿಕೊಂಡವರಲ್ಲಿ ಶೇಕಡಾ ಎಷ್ಟು ಪ್ರಮಾಣದಲ್ಲಿ ಬಳಕೆಯಾಗುತ್ತಿರುವ ಬಗ್ಗೆಯೂ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಬೇಕು. ಒಂದೊಂದೆ ಗ್ರಾಮಗಳನ್ನು ತೆಗೆದುಕೊಂಡು ಪ್ರತಿಯೊಂದು ಮನೆಗಳಿಗೆ ಶೌಚಾಲಯ ಇದ್ದ ಬಗ್ಗೆ ಮಾಹಿತಿ ಪಡೆದುಕೊಳ್ಳಲು ತಿಳಿಸಿದರು.

ಇದೇ ಸಂದರ್ಭದಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಅವರು ತಮ್ಮ ಮತಕ್ಷೇತ್ರದಲ್ಲಿ 27 ಗ್ರಾಮಗಳ ಪೈಕಿ ಮದಲಮಟ್ಟಿ ಗ್ರಾಮದಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ಶೌಚಾಲಯ ಬಳಕೆಯಾಗುತ್ತಿದ್ದು, ಇದೇ ರೀತಿಯ ಉಳಿದ ಗ್ರಾಮಗಳಲ್ಲಿ ಕ್ರಮವಹಿಸಲು ತಿಳಿಸಿದರು.

ಶೌಚಾಲಯ ಬಳಕೆ ಮಾಡುವುದರಿಂದ ಆಗುವ ಪ್ರಯೋಜನಗಳ ಕುರಿತು ಹೆಚ್ಚಿನ ಪ್ರಮಾಣದಲ್ಲಿ ಐಇಸಿ ಚಟುವಟಿಕೆಗಳನ್ನು ಆಯೋಜಿಸಲು ಸಚಿವರು ಸೂಚಿಸಿದರು. ಶೌಚಾಲಯ ಬಳಸುವಂತೆ ಮಾಡಲು ಸಲಹೆಗಳನ್ನು ಸಹ ಕೇಳಿದರು. ಕೆಲಸವೊಂದು ಅಧಿಕಾರಿಗಳು ಶೌಚಾಲಯ ಬಳೆಕೆ ಮಾಡುವಂತೆ ಮಾಡಲು ತಾವುಗಳು ಕೈಗೊಂಡ ಕ್ರಮಗಳ ಬಗ್ಗೆ ಸಭೆಗೆ ತಿಳಿಸಿದರು.

ನೆರೇಗಾ ಯೋಜನೆಯಿಂದ ಜಿಲ್ಲೆಯ ಜನರ ಅಭಿಪ್ರಾಯದ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವ ಈಶ್ವರಪ್ಪ ಅವರು ಈ ಯೋಜನೆಯಿಂದ ಜಿಲ್ಲೆಯಲ್ಲಿರುವ ಅಬಿವೃದ್ದಿಗೆ ಕ್ರಮವಹಿಸಲು ತಿಳಿಸಿದಾಗ ಈಗಾಗಲೇ ಜಿಲ್ಲೆಯಲ್ಲಿ 26 ಕಲ್ಯಾಣಿಗಳ ಪೈಕಿ 12 ಅಭಿವೃದ್ದಿಪಡಿಸಲಾಗುತ್ತಿದೆ. ಭಾರತೀಯ ಪುರಾತತ್ವ ಇಲಾಖೆಯಿಂದ ಕೆಲವೊಂದು ಕಲ್ಯಾಣಿಗಳನ್ನು ಅಭಿವೃದ್ದಿಪಡಿಸಲು ಸಾಧ್ಯವಾಗುತ್ತಿಲ್ಲವೆಂದು ತಿಳಿಸಿದಾಗ ಅಂತವುಗಳ ಪಟ್ಟಿ ಮಾಡಿಕೊಟ್ಟಲ್ಲಿ ಅನುಮತಿ ಕೊಡಲಸಲಾಗುವುದೆಂದು ತಿಳಿಸಿದರು.

ಸಭೆಯಲ್ಲಿ ರಾಜ್ಯ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಸಚಿವರ ವಿಶೇಷಾಧಿಕಾರಿ ಜಯರಾಮ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಯ ಮುಖ್ಯ ಇಂಜಿನೀಯರ್ ಇಜಾಜ್ ಹುಸೇನ್, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಜಿ.ಪಂ ಯೋಜನಾಧಿಕಾರಿ ಎಂ.ವಿ.ಚಳಗೇರಿ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Nimma Suddi
";