ನಿಮ್ಮ ಸುದ್ದಿ ಬಾಗಲಕೋಟೆ
ಕೇಂದ್ರ ಗೃಹ ಸಚಿವರಾದ ಅಮಿತ್ ಶಾಹ ಅವರು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮ ಬಳಿಯ ಸಾಯಿಪ್ರಿಯ ಶುಗರ್ಸ್ ಲಿ. ಯೂನಿಟ್ ಆವರಣದಲ್ಲಿ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆ ವತಿಯಿಂದ ಭಾನುವಾರದಂದು ಏರ್ಪಡಿಸಿದ ಸಮಾರಂಭದಲ್ಲಿ ನೂತನ ಕಾರ್ಖಾನೆ ಗಳ ಉದ್ಘಾಟನೆ, ನಿರಾಣಿ ಸಮೂಹ ದಿಂದ 75 ಸಾವಿರ ಟಿಸಿಡಿ ಕಬ್ಬು ನುರಿಸುವ, 260 ಮೆ.ವ್ಯಾ. ಸಹ ವಿದ್ಯುತ್, 26 ಲಕ್ಷ ಲೀ. ಇಥೆನಾಲ್ ಪ್ರತಿದಿನ ಬಯೋ ಸಿ.ಎನ್.ಜಿ. & Co2 ಉತ್ಪಾದನೆ ಗಳ ವಿಸ್ತರಣೆ ಯೋಜನೆಗಳಿಗೆ ಭೂಮಿಪೂಜೆ ಹಾಗೂ ಅಡಿಗಲ್ಲು ನೆರವೇರಿಸಿದರು.
ರಾಜ್ಯ ದ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿಗಳು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ ಕಾರಜೋಳ, ನೂತನ ಸಚಿವರಾದ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ,ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವರಾದ ಆರ್. ಶಂಕರ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ್, ವಿಜಯಪುರ ಸಂಸದ ಪರಮೇಶ ಜಿಗಜಿಣಗಿ, ಕೊಪ್ಪಳ ಸಂಸದ ಸಂಗಣ್ಣ ಕರಡಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಶಶಿಕಲಾ ಜೊಲ್ಲೆ, ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ, ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ್, ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಸಂಸದ ಸಂಜಯ್ ಪಾಟೀಲ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.