ಬೆಂಗಳೂರು
SSLC, PU ವಿದ್ಯಾರ್ಥಿಗಳು ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಫೇಲ್ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು. ಒಂದಲ್ಲ ಎರಡು ಅವಕಾಶಗಳನ್ನು ಶಿಕ್ಷಣ ಇಲಾಖೆ ನೀಡಲಿದೆ.
ಅಂದರೆ, ಎರಡು ಬಾರಿ ಪೂರಕ ಪರೀಕ್ಷೆಯನ್ನು ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಎಲ್ಲರಿಗೂ ಶಿಕ್ಷಕರ ದಿನಾಚರಣೆಯ ಶುಭವನ್ನು ಕೋರುತ್ತೇನೆ.
ಶಿಕ್ಷಕರ ವರ್ಗಾವಣೆ ವಿಚಾರದಲ್ಲೂ ಸಾಕಷ್ಟು ಗೊಂದಲ ಇತ್ತು. 32 ಸಾವಿರ ಶಿಕ್ಷಕರು ಸ್ವಂತ ಇಚ್ಛೆಯಿಂದ ವರ್ಗಾವಣೆ ತೆಗೆದುಕೊಂಡಿದ್ದಾರೆ. ನಮ್ಮ ಸರ್ಕಾರ ಬಂದ ಮೇಲೆ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಕರೊನಾ ನಂತರ ಕಲಿಕಾ ಚೇತರಿಕೆ ಕಾರ್ಯಕ್ರಮ ಮಾಡುತ್ತಿದ್ದೇವೆ.
ಮಕ್ಕಳು ಹಾಗೂ ಪಾಲಕರ ಒತ್ತಡ ಕಡಿಮೆ ಮಾಡಲು ಒಂದೇ ವರ್ಷದಲ್ಲಿ 3 ಸಲ ಪರೀಕ್ಷೆಗೆ ಅವಕಾಶ ಕೊಡುತ್ತಿದ್ದೇವೆ. ಈ ವರ್ಷದಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ವರ್ಷಕ್ಕೆ 3 ಪರೀಕ್ಷೆಗೆ ಚಾಲನೆ ಕೊಡುತ್ತಿದ್ದೇವೆ ಎಂದು ತಿಳಿಸಿದರು.