ರೈಲ್ವೆ ಸ್ಟೇಷನ್, ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದ್ದು, ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಕೂಡ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳ ಮೇಲೂ ನಿಗಾ ಇಡಲಾಗುವುದು . ಅಭ್ಯರ್ಥಿಗಳನ್ನು ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ ಎಂದರು.
ಬ್ಯಾಂಕ್ಗಳಿಗೆ ಚುನಾವಣಾ ಆಯೋಗ ನಿರ್ದೇಶನ ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ಮಾಹಿತಿ ನೀಡಬೇಕು. ಎಲ್ಲ ಬ್ಯಾಂಕ್ಗಳು ದೈನಂದಿನ ವರದಿಗಳನ್ನು ಕಳುಹಿಸಬೇಕು ಎಂದು ವಿವರಿಸಿದರು.