This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Agriculture News

ಬೆಂಬಲ ಬೆಲೆ ಯೋಜನೆಯಡಿ ರಾಜ್ಯಾದ್ಯಂತ FAQ ಗುಣಮಟ್ಟದ ಜೋಳ ಖರೀದಿಗೆ ಬೆಲೆ ನಿಗದಿ

ಬೆಂಬಲ ಬೆಲೆ ಯೋಜನೆಯಡಿ ರಾಜ್ಯಾದ್ಯಂತ FAQ ಗುಣಮಟ್ಟದ ಜೋಳ ಖರೀದಿಗೆ ಬೆಲೆ ನಿಗದಿ

ಗದಗ: ಪ್ರಸಕ್ತ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್‌ಎಕ್ಯೂ ಗುಣಮಟ್ಟದ ಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್‌. ಸೂಚಿಸಿದರು.

ಗದಗ ನಗರದ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಋುತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜೋಳ ಕೃಷಿ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮೇ 31 ರ ವರೆಗೆ ನೋಂದಣಿ ಕಾರ್ಯ ಕೈಗೊಳ್ಳಲಾಗುವುದು. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಡಾ. ಹಂಪಣ್ಣ ಸಜ್ಜನ ಮಾತನಾಡಿ, ಜೋಳ ಉತ್ಪನ್ನ ಖರೀದಿ ನೋಂದಣಿ ಕಾರ್ಯ ಮೇ 31 ರವರೆಗೆ ನೋಂದಣಿ ಕೈಗೊಳ್ಳಲಾಗುವುದು. ಪ್ರತಿ ಕ್ವಿಂಟಲ್‌ಗೆ ಜೋಳ – (ಹೈಬ್ರೀಡ್‌) ಗೆ 3,180 ರೂ ಹಾಗೂ ಜೋಳ – ( ಮಾಲ್ಡಂಡಿ ) ಗೆ 3,225 ರೂ. ನಿಗದಿಪಡಿಸಲಾಗಿದ್ದು, ಖರೀದಿ ಪ್ರಕ್ರಿಯೆ ಏಪ್ರಿಲ್ 1 ರಿಂದ ಮೇ 31 ರವರೆಗೆ ಜರುಗಲಿದೆ.

ಶಾಖಾ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಶಾಖಾ ಗದಗ ಹಾಗೂ ಶಾಖಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನರಗುಂದ ಈ ಎರಡು ಸಂಸ್ಥೆಗಳನ್ನು ಖರೀದಿ ಸಂಸ್ಥೆಗಳನ್ನಾಗಿ ನಿಗದಿಪಡಿಸಲಾಗಿದೆ.ಗದಗ ಜಿಲ್ಲೆಯ 5 ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು.

ಕೇಂದ್ರ ಸರಕಾರದ ಮಾನದಂಡಗಳ ಅನ್ವಯ ಎಫ್‌ಎಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜ್ಸನಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‌ಗಳನ್ನು ನೇಮಿಸಬೇಕು. ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರಗೆ 20 ಕ್ವಿಂಟಲ್‌ನಂತೆ ರೈತರಿಂದ ಅವರು ಹೊಂದಿರುವ ಜಮೀನಿಗೆ ಅನುಗುಣವಾಗಿ ಎಫ್‌ಐಡಿ ಪ್ರಕಾರ ಖರೀದಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕೃಷಿ ಇಲಾಖೆ, ಎಪಿಎಂಸಿ ಕಾರ್ಯದರ್ಶಿ, ಕೃಷಿ ಮಾರಾಟ ಇಲಾಖೆ, ಕಾನೂನು ಮಾಪನ ಇಲಾಖೆ, ಕೆಎಫ್‌ಸಿಎಸ್‌ಸಿ ಹಾಗೂ ಮಾರ್ಕೆಟಿಂಗ್‌ ಫೆಡರೇಶನ್‌ದ ಶಾಖಾ ವ್ಯವಸ್ಥಾಪಕರು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Nimma Suddi
";