ಬೆಂಗಳೂರು: ಜನವರಿ 22 ರಂದು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್ ಸರ್ಕಾರ ರಜೆ ಘೋಷಣೆ ಮಾಡಲಿ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದರು.
ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು, ರಜೆ ಕೊಡುವ ವಿಚಾರವಾಗಿ ಇಷ್ಟು ದಿನ ಮೀನಾಮೇಷ ಎಣಿಸಿದ್ದೆ ತಪ್ಪು.ರಜೆ ಕೊಡಬೇಕೆಂದು ಹೇಳಿಸಿಕೊಂಡು ಮಾಡಬೇಕಾ ? ಇವರು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಬೇಕು ಎಂದರು.
ರಾವಣನ ಸಹೋದರ ವಿಭಿಷಣ ರಾವಣನ ದುರ್ನಡತೆ ವಿರೋಧಿಸಿ ರಾಮನ ಪರ ಬಂದ. ಅದೇ ರೀತಿ ಕಾಂಗ್ರೆಸ್‌ನಲ್ಲಿ ರಾಮನ ಮಂದಿರ ವಿಚಾರವಾಗಿ ಬೇರೆ ಬೇರೆ ಹೇಳಿಕೆಯನ್ನ ನೀಡಿದ್ದಾರೆ. ಹೀಗಾಗಿ ವಿಭಿಷಣ ಮನಸ್ಥಿತಿಯ ಕಾಂಗ್ರೆಸ್‌ನವರು ಪಕ್ಷ ತೊರೆದು ಬರುವುದು ಒಳಿತು ಎಂದು ಸಲಹೆ ನೀಡಿದರು.
ರಾಮಮಂದಿರ ವಿಚಾರವಾಗಿ ಕಾಂಗ್ರೆಸ್ ಪಕ್ಷದ ನಿಲುವನ್ನು ಖಂಡಿಸಿ ಗುಜರಾತ್ ಕಾಂಗ್ರೆಸ್ ಶಾಸಕರು ಚಾವ್ಡಾ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ನ ನಿಲುವನ್ನ ವಿರೋಧಿ ಅವರು ರಾಜೀನಾಮೆ ನೀಡಿದ್ದಾರೆ ಅದನ್ನ ಸ್ವಾಗತಿಸುತ್ತೇನೆ ಎಂದು ತಿಳಿಸಿದರು.
ಗೋದ್ರಾ ರೀತಿಯ ಘಟನೆಯ ಬಗ್ಗೆ ಹರಿಪ್ರಸಾದ್ ಹೇಳಿದ್ದರ ಬಗ್ಗೆ ಪೋಲಿಸರ ಬಳಿ ಮಾಹಿತಿ ನೀಡಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಳಿಕೆಯ ಬಗ್ಗೆ ಮಾಹಿತಿ ನೀಡಬೇಕು. ನಾಳೆ ಈ ರೀತಿಯ ಘಟನೆ ನಡೆದ್ರೆ, ಆಗ ನಾನು ಮುಂಚೆಯೇ ಹೇಳಿಕೆ ನೀಡಿದ್ದೆ, ನನ್ನ ಬಳಿ ಮಾಹಿತಿ ಕೇಳಲಿಲ್ಲ ಎಂದು ಹೇಳಬಹುದು ಎಂದು ವಿವರಿಸಿದರು.