This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Politics News

ಕುಮಾರೇಶ್ವರ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗೆ ಉಚಿತ ಚಿಕಿತ್ಸೆ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯಿಂದ ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತಿರುವ ಹಿನ್ನಲೆಯಲ್ಲಿ ಎಪ್ರೀಲ್ ೨೯ರಿಂದ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಪ್ರಾರಂಭಿಸಲು ಸಂಸದ ಪಿ.ಸಿ.ಗದ್ದಿಗೌಡರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕ ವೀರಣ್ಣ ಚರಂತಿಮಠ ಅವರ ಜೊತೆ ಸಮಾಲೋಚನೆ ನಡೆಸಿ ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯಲ್ಲಿ ನಗರದ ಕುಮಾರೇಶ್ವರ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ನೀಡಲು ತಿರ್ಮಾನಿಸಲಾಗಿದ್ದು, ಆಸ್ಪತ್ರೆಯಲ್ಲಿ ೧೩೫ ಆಕ್ಸಿಜನ್ ಬೆಡ್ ಹಾಗೂ ೩೨೦ ಜನರಲ್ ಬೆಡ್ ಸೇರಿ ಒಟ್ಟು ೫೦೦ ಬೆಡ್‌ಗಳ ವ್ಯವಸ್ಥೆ ಇರುವುದಾಗಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು. ೧೫ ಸಾವಿರ ಕಿಲೋ ಲೀಟರ್ ಲಿಕ್ವಿಡ್ ಆಕ್ಸಿಜನ್ ಸ್ಟಾಕ್ ಇದ್ದು, ಪ್ರತಿದಿನ ೯೦೦ ಕೆಜಿ ಸಿಲೆಂಡರಗಳ ವ್ಯವಸ್ಥೆ, ೧೨ ವೆಂಟಿಲೇಟರ್ ಇರುವುದಾಗಿ ಸಭೆಗೆ ತಿಳಿಸಿದರು.

ಕುಮಾರೇಶ್ವರ ಆಸ್ಪತ್ರೆಯಲ್ಲಿ ಸರಕಾರದಿಂದ ರೆಫರ್ ಮಾಡಲಾದ ಕೋವಿಡ್ ರೋಗಿಗಳಿಗೆ ಸಂಪೂರ್ಣವಾಗಿ ಉಚಿತವಾಗಿ ಚಿಕಿತ್ಸೆ ದೊರೆಯಲಿದ್ದು, ಆ ವೆಚ್ಚವನ್ನು ಸರಕಾರದಿಂದ ಕುಮಾರೇಶ್ವರ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಸುವರ್ಣ ಆರೋಗ್ಯ ಟ್ರಸ್ಟ್ (ಎಬಿಪಿಕೆ) ಮೂಲಕ ಪಾವತಿ ಮಾಡಲಾಗುತ್ತಿದೆ. ನೇರವಾಗಿ ಕೋವಿಡ್ ಚಿಕಿತ್ಸೆಗೆ ಒಳಗಾದಲ್ಲಿ ಅಂತಹ ರೋಗಿಗಳಿಗೆ ಸರಕಾರ ನಿಗದಿಪಡಿಸಿದ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅದನ್ನು ರೋಗಿಗಳು ಪಾವತಿ ಮಾಡಬೇಕಾಗುತ್ತದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

ಕುಮಾರೇಶ್ವರ ಆಸ್ಪತ್ರೆಯಲ್ಲಿ ಆರೋಗ್ಯ ಮಿತ್ರ ಸಿಬ್ಬಂದಿಗಳನ್ನು ನಿಯೋಜಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು. ಆಸ್ಪತ್ರೆಗೆ ರೋಗಿಗಳ ಬರುವ ಮುಖ್ಯದ್ವಾರದಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಯಿತು. ಕೋವಿಡ್ ಚಿಕಿತ್ಸೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪ್ರಂಟ್‌ಲೈನ್ ವರ್ಕಸ್‌ಗಳಿಗೆ ಇನ್ಸೂರೆನ್ಸ್ಗೆ ಒಳಪಡಿಸಲು ಕ್ರಮಜರುಗಿಸುವಂತೆ ತಿಳಿಸಲಾಯಿತು.

ಸಭೆಯಲ್ಲಿ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ, ಬಿವಿವ ಸಂಘದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಅಶೋಕ ಮಲ್ಲಾಪೂರ, ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಅಶೋಕ ಸಜ್ಜನ ಬೇವೂರ, ವೈದ್ಯಕೀಯ ಅಧೀಕ್ಷಕಿ ಡಾ.ಭುವನೇಶ್ವರಿ, ಡಾ.ಸಾಲಿಮಠ, ಡಾ.ಮಾಂತೇಶ, ಆಯುವೇದಿಕ್ ಕಾಲೇಜಿನ ಪ್ರಾಚಾರ್ಯ ಡಾ.ದಿಲೀಪ್ ನಾಟಿಕಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Nimma Suddi
";