This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsState News

ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ

ಜಿಲ್ಲಾಡಳಿತದಿಂದ ಗಾಂಧಿ ಹಾಗೂ ಶಾಸ್ತ್ರೀ ಜಯಂತಿ ಆಚರಣೆ

ಬಾಗಲಕೋಟೆ

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಆಶ್ರಯದಲ್ಲಿ ಗಾಂಧಿ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಶಾಸಕ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಗಾಂಧಿ ಹಾಗೂ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.

ವಿವಿಧ ಧರ್ಮದ ಗುರುಗಳಾದ ಸಂಸ್ಕøತ ಪಂಡಿತ ಬಿಂಧುಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಪ್ರಕಾಶ ಮಾರೋಸ್ ಬೈಬಲ್ ಹಾಗೂ ಆಸೀಪ್ ಎಲ್. ಮುದಗಲ್ಲ ಅವರು ಕುರಾನ್ ಕುರಿತು ಉಪದೇಶ ನೀಡಿದರು. ಬಸವೇಶ್ವರ ಕಲಾ ಮಹಾವಿದ್ಯಾಲಯದ ಡಾ.ಆರ್.ಎಂ.ಬೆಣ್ಣೂರ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋತನೆ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹನಮರಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಚವ್ಹಾಣ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಜಿಲ್ಲಾ ಆಯುಷ ಅಧಿಕಾರಿ ಅಕ್ಕಮಹಾದೇವಿ ಗಾಣಿಗೇರ, ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ್ ಕಿಲ್ಲೇದಾರ ಕಾರ್ಯಕ್ರಮ ನಿರೂಪಿಸಿದರು.

*ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ*

*ವಿಜೇತರಿಗೆ ಪ್ರಶಸ್ತಿ ಪತ್ರ, ನಗದು ಬಹುಮಾನ ವಿತರಣೆ*

ಬಾಗಲಕೋಟೆ:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಮಹಾತ್ಮಾಗಾಂಧೀಯವರ 154ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನವನ್ನು ಶಾಸಕ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಸೋಮವಾರ ವಿತರಿಸಿದರು.

ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ನಡೆದ ಗಾಂಧೀ ಹಾಗೂ ಶಾಸ್ತ್ರೀ ಜಯಂತಿ ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರೌಡಶಾಲಾ ವಿಭಾಗದಲ್ಲಿ ಯಡಹಳ್ಳಿ ಸರಕಾರಿ ಪ್ರೌಢಶಾಲೆಯ ಸ್ನೇಹಾ ಗೌರಿ (ಪ್ರಥಮ), ಅಮೀನಗಡ ಎಕ್ಸಲೆಂಟ್ ಹೈಸ್ಕೂಲ್ ಅನುಷಾ ಮುತ್ತಣ್ಣ ಹಳ್ಳದ (ದ್ವಿತೀಯ), ಗುಳೇದಗುಡ್ಡ ನೆಹರು ಇಂಟರ್‍ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನ ಭೂಮಿಕಾ ಮಲ್ಲಪ್ಪ ತಪ್ಪದ (ತೃತೀಯ) ಬಹುಮಾನ ಪಡೆದುಕೊಂಡರು.
ಪಿಯುಸಿ ವಿಭಾಗದಲ್ಲಿ ಮುಧೋಳನ ಆರ್.ಎಂ.ಜಿ ಕಾಲೇಜಿನ ಅಮೃತಾ ಮಾವಿನಮರದ (ಪ್ರಥಮ), ಬಸವೇಶ್ವರ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದ ರಾಚಮ್ಮ ಭೀಮಳ್ಳಿ (ದ್ವಿತೀಯ) ಹಾಗೂ ಕಲಾದಗಿಯ ಗುರುಲಿಂಗೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಅಶ್ವಿನಿ ನಡಕಟ್ಟಿನ (ತೃತೀಯ) ಸ್ಥಾನ ಪಡೆದುಕೊಂಡರು. ಪದವಿ, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಾವ್ಯಾ ಚಿಪ್ಪಲಕಟ್ಟಿ (ಪ್ರಥಮ), ಮುಧೋಳ ತಾಲೂಕಿನ ಯಡಹಳ್ಳಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸುವರ್ಣ ಕೊಳವಿ (ದ್ವಿತೀಯ), ರಾಜಶ್ರೀ ಯಮನಪ್ಪ ಹಳ್ಳಿ (ತೃತೀಯ) ಬಹುಮಾನ ಪಡೆದುಕೊಂಡರು.

ಗಾಂಧೀ ಜಯಂತಿ ಅಂಗವಾಗಿ ರಾಜ್ಯದ ಪ್ರತಿ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲಾ, ಪಿಯುಸಿ, ಪದವಿ-ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು, ಇದರಲ್ಲಿ ಪ್ರತಿ ವಿಭಾಗಕ್ಕೆ ಪ್ರತ್ಯೇಕವಾಗಿ ಮೂರು ವಿಷಯಗಳನ್ನು ಪ್ರಬಂಧ ಸ್ಪರ್ಧೆಗೆ ನೀಡಲಾಗಿತ್ತು, ಅದರಲ್ಲಿ ವಿದ್ಯಾರ್ಥಿಗಳು ತಮಗೆ ಇಷ್ಟವಾದ ವಿಷಯವನ್ನು ಆಯ್ದುಕೊಂಡು ಪ್ರಬಂಧ ಬರೆಯಲು ಅವಕಾಶ ನೀಡಲಾಗಿತ್ತು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಮೂರು ವಿಭಾಗದ ತಲಾ ಮೂರು ಅತ್ಯುತ್ತಮ ಪ್ರಬಂಧಗಳನ್ನು ರಾಜ್ಯ ಮಟ್ಟಕ್ಕೆ ನಾಮನಿರ್ದೇಶನ ಮಾಡಲಾಗಿದೆ.

ರಾಜ್ಯ ಮಟ್ಟದಲ್ಲಿ ಆಯ್ಕೆಯಾಗುವ ಪ್ರಥಮ ಬಹುಮಾನಕ್ಕೆ 31,000 ರೂ., ಎರಡನೆಯ ಬಹುಮಾನ 21,000 ರೂ. ಹಾಗೂ ಮೂರನೆ ಬಹುಮಾನ 11,000 ರೂ. ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿಜೇತರು ರಾಜ್ಯ ಮಟ್ಟದ ಬಾಪೂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.

";