This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Education NewsNational NewsState News

ವಿದ್ಯಾರ್ಥಿಗಳ ಮನೆ-ಮನೆಗೆ ತೆರಳಿ ಉಪನ್ಯಾಸಕರ ಮನವಿ:ಸರ್ಕಾರಿ ಕಾಲೇಜಿನಲ್ಲಿ ಪದವಿಗೆ ದಾಖಲಾಗಿ

ವಿದ್ಯಾರ್ಥಿಗಳ ಮನೆ-ಮನೆಗೆ ತೆರಳಿ ಉಪನ್ಯಾಸಕರ ಮನವಿ:ಸರ್ಕಾರಿ ಕಾಲೇಜಿನಲ್ಲಿ ಪದವಿಗೆ ದಾಖಲಾಗಿ

ಚಿಕ್ಕಬಳ್ಳಾಪುರ: ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವುದರ ಬದಲು ಲಕ್ಷಾಂತರ ರೂಪಾಯಿ ಡೊನೇಷನ್ ನೀಡಿ, ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಮುಗಿಬಿದ್ದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿದರೆ, ಪ್ರವೇಶ ಪಡೆದರೆ ಶುಲ್ಕವೂ ಕಡಿಮೆ, ಒತ್ತಡವೂ ಕಡಿಮೆ, ಸರ್ಕಾರಿ ಸವಲತ್ತುಗಳು ಹೆಚ್ಚಾಗಿವೆ. ಪ್ರವೇಶ ಶುಲ್ಕವಿಲ್ಲದಿದ್ದರೂ ನಾವೇ ದಾನಿಗಳ ಮೂಲಕ ಪಡೆದುಕೊಂಡು ಪ್ರವೇಶ ಕಲ್ಪಿಸುತ್ತೇವೆ. ಖಾಸಗಿ ಕಾಲೇಜು ಬದಲು ಸರ್ಕಾರಿ ಕಾಲೇಜು ಉಳಿಸುವಂತೆ ಉಪನ್ಯಾಸಕರು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಲ್ಲಿ ಮನವಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಇದೆ. ಕಾಲೇಜಿನಲ್ಲಿ ಪ್ರತಿಭಾವಂತ ನುರಿತ ಲಕ್ಷಾಂತರ ರೂಪಾಯಿ ಸಂಬಳ ಪಡೆಯುವ ಅನುಭವಿ ಉಪನ್ಯಾಸಕರುಗಳು ಇದ್ದಾರೆ. ಆದರೂ ಸ್ವತಃ ಗುಡಿಬಂಡೆ ಪಟ್ಟಣದ ವಿದ್ಯಾರ್ಥಿಗಳು ಇಲ್ಲಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಬರುತ್ತಿಲ್ಲ.

ಪ್ರವೇಶ ಪಡೆಯುತ್ತಿಲ್ಲ. ಲಕ್ಷಾಂತರ ರೂಪಾಯಿ ಶುಲ್ಕ ನೀಡಿ, ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಮುಂದಾಗಿದ್ದಾರೆ. ಇದರಿಂದ ಎಚ್ಚರಗೊಂಡ ಉಪನ್ಯಾಸಕರುಗಳು ಪಿಯುಸಿ ಪಾಸಾದ ವಿದ್ಯಾರ್ಥಿಗಳ ಮನೆ-ಮನೆಗೆ ಭೇಟಿ ನೀಡಿ ತಮ್ಮ ಸರ್ಕಾರಿ ಕಾಲೇಜಿನಲ್ಲಿ ಪ್ರವೇಶ ಪಡೆಯುವಂತೆ ದುಂಬಾಲು ಬಿದ್ದಿದ್ದಾರೆ.

ಇದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕರುಗಳು ಪಿಯುಸಿ ಪಾಸಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ನಮ್ಮ ಸರ್ಕಾರಿ ಕಾಲೇಜಿನಲ್ಲಿ ದಾಖಲಾಗುವಂತೆ ಅಂಗಲಾಚುತ್ತಿದ್ದಾರೆ.