ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ 2ನೇ ದಿನದಂದು ಅಲಭ್ಯರಾಗಿದ್ದ ರವಿಚಂದ್ರನ್ ಅಶ್ವಿನ್ ಇದೀಗ ತಂಡಕ್ಕೆ ಮರಳಿದ್ದಾರೆ. ಬಲ್ಲಮೂಲಗಳ ಮಾಹಿತಿ ಪ್ರಕಾರ, ಇಂದು ಬೆಳಿಗ್ಗೆ ಅಶ್ವಿನ್ ಚೆನ್ನೈನಿಂದ ರಾಜ್ಕೋಟ್ಗೆ ತೆರಳಿದ್ದು, ಅಲ್ಲದೆ ಮಧ್ಯಾಹ್ನದ ವೇಳೆಗೆ ಟೀಮ್ ಇಂಡಿಯಾ ಕೂಡಿಕೊಳ್ಳಲಿದ್ದಾರೆ ಎಂದು ಮಾಹಿತಿ ತಿಳಿದೆ.
ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ 2ನೇ ದಿನದಾಟದ ಮುಕ್ತಾಯದ ಬೆನ್ನಲ್ಲೇ ರವಿಚಂದ್ರನ್ ಅಶ್ವಿನ್ ಚೆನ್ನೈಗೆ ತೆರಳಿದ್ದರು. ತಾಯಿಯ ಅನಾರೋಗ್ಯದ ನಿಮಿತ್ತ ಅವರು ತಂಡದಿಂದ ಹೊರಗುಳಿದಿದ್ದರು.ಮೂರನೇ ದಿನದಾಟದಲ್ಲಿ ಅಶ್ವಿನ್ ಅವರ ಬದಲಿಗೆ ದೇವದತ್ ಪಡಿಕ್ಕಲ್ ಕಣಕ್ಕಿಳಿದಿದ್ದರು.
ಇದೀಗ ನಾಲ್ಕನೇ ದಿನದಾಟದ ವೇಳೆ ರವಿ ಅಶ್ವಿನ್ ತಂಡ ಕೂಡಿಕೊಳ್ಳಲಿದ್ದು, ಭಾರತ ತಂಡದ 2ನೇ ಇನಿಂಗ್ಸ್ ಬೌಲಿಂಗ್ ವೇಳೆ ಅವರು ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಅಶ್ವಿನ್ ಅವರ ವಾಪಾಸಾತಿಯು ಭಾರತ ತಂಡದ ಬೌಲಿಂಗ್ ಬಲವನ್ನು ಹೆಚ್ಚಿಸಲಿದೆ. ಏಕೆಂದರೆ ಅಶ್ವಿನ್ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡವು ನಾಲ್ವರು ಬೌಲರ್ಗಳನ್ನು ಮಾತ್ರ ಬಳಸಿಕೊಂಡಿದ್ದು, ಇದೀಗ ಅವರ ರಿಎಂಟ್ರಿಯಿಂದಾಗಿ ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಐವರು ಬೌಲರ್ಗಳನ್ನು ಬಳಸಿಕೊಳ್ಳಬಹುದಾಗಿದೆ.