ಬೆಂಗಳೂರು,: ಸರ್ಕಾರಿ ಕಾಲೇಜುಗಳ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಅವರ ಕೋರ್ಸ್ ಅವಧಿಯಲ್ಲಿ ಕೌಶಲ ತರಬೇತಿ ನೀಡಲು ಉನ್ನತ ಶಿಕ್ಷಣ ಇಲಾಖೆಯು ಟೊಯೊಟಾ ಕಿರ್ಲೋಸ್ಕರ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಒಪ್ಪಂದದ ಭಾಗವಾಗಿ ರಾಮನಗರ ಮತ್ತು ಬಿಡದಿ ಸುತ್ತಮುತ್ತಲಿನ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಟೊಯೊಟಾ ಕಿರ್ಲೋಸ್ಕರ್ ಕೈಗಾರಿಕೆಗಳಿಗೆ ಭೇಟಿ ನೀಡಿ ತರಬೇತಿ ಪಡೆಯಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ತಿಳಿಸಿದ್ದಾರೆ.
ಟೊಯೊಟಾ ಕಿರ್ಲೋಸ್ಕರ್ ರಾಜ್ಯಾದ್ಯಂತ ಎಲ್ಲಾ ಕಾಲೇಜುಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ ಎಂದು ಸುಧಾಕರ್ ಹೇಳಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇಲಾಖೆಯು ಸಂಶೋಧನೆ ಮತ್ತು ತರಬೇತಿಗಾಗಿ ಆಸ್ಟ್ರೇಲಿಯಾ ಮತ್ತು ನ್ಯೂಜೆಲ್ಯಾಂಡ್ ಮೂಲದ ಎಂಟು ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ವಿಶ್ವವಿದ್ಯಾಲಯಗಳಲ್ಲಿ ಸುಮಾರು 10 ಸರ್ಕಾರಿ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಸಂಶೋಧನೆ ಮತ್ತು ತರಬೇತಿ ಅವಕಾಶಗಳನ್ನು ಪಡೆಯಲಿವೆ.
ಎಲ್ಲಾ ಒಪ್ಪಂದಗಳು ಸಂಪೂರ್ಣವಾಗಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯಡಿಯಲ್ಲಿ ರೂಪಿತಗೊಂಡಿವೆ ಎಂದು ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ದೇಶದಲ್ಲಿ ಮೂರನೇ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಹೆಚ್ಚುವರಿ 3,300 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಟೊಯೊಟಾ ಕಿರ್ಲೋಸ್ಕರ್ ಕೆಲವು ತಿಂಗಳುಗಳ ಹಿಂದೆ ಹೇಳಿತ್ತು. ಹೊಸ ಘಟಕವು 2026 ರ ವೇಳೆಗೆ ಒಂದು ಲಕ್ಷ ಯುನಿಟ್‌ಗಳ ವಾರ್ಷಿಕ ಸಾಮರ್ಥ್ಯವನ್ನು ಹೊಂದಲಿದೆ ಎಂದು ನಿರೀಕ್ಷಿಸಲಾಗಿದೆ.