ಬೆಂಗಳೂರು: ರಾಜ್ಯದ ನಾನಾ ಶಾಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ 35 ಸಾವಿರ, ಪ್ರೌಢ ಶಾಲೆಗಳಿಗೆ 8954 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರಕಾರ ಅಸ್ತು ಅಂದಿದೆ.
ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಂದಾಜು 60 ಸಾವಿರ ಹುದ್ದೆಗಳು ಖಾಲಿ ಇದ್ದುಘಿ, ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಶಾಲಾ ಶಿಕ್ಷಕರ ಸಂಘದಿಂದ ಸರಕಾರಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಅದರಂತೆ ಈಗ ಸರಕಾರ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳುವಂತೆ ಆಯಾ ಜಿಲ್ಲಾ ಡಿಡಿಪಿಐಗಳಿಗೆ ಸೂಚಿಸಿದೆ.
ಅಲ್ಲದೇ ತಾಲೂಕುವಾರು ಎಷ್ಟೆಷ್ಟು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಎಂಬುದನ್ನು ತಿಳಿಸಿದೆ. ಆದರೆ ಪ್ರೌಢಶಾಲೆಗಳಿಗೆ 8954 ಅತಿಥಿ ಶಿಕ್ಷಕರ ನೇಮಕಕ್ಕೂ ಒಪ್ಪಿಗೆ ನೀಡಿದೆ.
ಸರಕಾರದ ಈ ನಿರ್ಧಾರವನ್ನು ರಾಜ್ಯ ಶಾಲಾ ಶಿಕ್ಷಕರ ಸಂಘದ ಪದಾಕಾರಿಗಳು ಸ್ವಾಗತಿಸಿದ್ದಾರೆ.