This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಬಿಯರ್ ಪ್ರಿಯರಿಗೆ ಬಿಗ್ ಶಾಕ್ :ದರ ಏರಿಕೆಗೆ ಸಜ್ಜಾದ ಸರ್ಕಾರ

ಬಿಯರ್ ಪ್ರಿಯರಿಗೆ ಬಿಗ್ ಶಾಕ್ :ದರ ಏರಿಕೆಗೆ ಸಜ್ಜಾದ ಸರ್ಕಾರ

ಬೆಂಗಳೂರು: ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನುಮತ್ತೊಮ್ಮೆ ಹೆಚ್ಚಿಸಲು ಪ್ರಸ್ತಾಪಿಸಿರುವುದಾಗಿ ವರದಿಯಾಗಿದ್ದು, ಒಂದು ವೇಳೆ ಇದು ನಿಜವಾದಲ್ಲಿ ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10 ರೂ. ವರೆಗೆ ದರ ಹೆಚ್ಚಾಗಲಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಬಿಯರ್ ಮಾರಾಟದಲ್ಲಿ ದೊಡ್ಡ ಮಟ್ಟದ ಬೆಳವಣಿಗೆ ಕಂಡುಬಂದಿರುವುದರಿಂದ ಆ ಮೂಲದಿಂದ ಹೆಚ್ಚು ಆದಾಯ ಸಂಗ್ರಹಿಸುವ ನಿಟ್ಟಿನಲ್ಲಿ ಸರ್ಕಾರವು ಸುಂಕವನ್ನು ಹೆಚ್ಚಿಸುವತ್ತ ಮನ ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದೆ.

ಅಬಕಾರಿ ನಿಯಮಗಳು, 1968’ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿದೆ. ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ದರ ಹೆಚ್ಚಳ ಜಾರಿಗೆ ಬಂದಿದ್ದೇ ಆದಲ್ಲ, ಆರು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ಮದ್ಯದ ಬೆಲೆಯಲ್ಲಿ ಮಾಡಿದ ಏರಿಕೆಯಾಗಲಿದ್ದು, ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತೀಯ ನಿರ್ಮಿತ ಮದ್ಯದ ಮೇಲೆ ಶೇ 20ರಷ್ಟು ಮತ್ತು ಬಿಯರ್ ಮೇಲೆ ಶೇ 175ರಿಂದ ಶೇ 185ಕ್ಕೆ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದರು.

ರಾಜ್ಯ ಸರಕಾರಕ್ಕೆ ಅಬಕಾರಿ ಆದಾಯವೇ ನಿರ್ಣಾಯಕ. 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಅಬಕಾರಿಯಿಂದ 36,000 ಕೋಟಿ ರೂಪಾಯಿ ಆದಾಯ ಗಳಿಸುವ ಗುರಿಯನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.

";