This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

Politics News

ಗ್ರಾಪಂ ಚುನಾವಣೆ:3,382 ಅಭ್ಯರ್ಥಿಗಳು ಕಣದಲ್ಲಿ

ಮೊದಲ ಹಂತದ ಗ್ರಾ.ಪಂ ಚುನಾವಣೆ-2020

ನಿಮ್ಮ ಸುದ್ದಿ ಬಾಗಲಕೋಟೆ

ಮೊದಲ ಹಂತದ ಗ್ರಾಮ ಪಂಚಾಯತಿಗಳ ಚುನಾವಣೆಯಲ್ಲಿ ಅಂತಿಮವಾಗಿ 89 ಗ್ರಾಮ ಪಂಚಾಯತಿಗಳ 1397 ಸ್ಥಾನಗಳಿಗೆ 3382 ಅಭ್ಯರ್ಥಿಗಳು  ಕಣದಲ್ಲಿ ಉಳಿದಿದ್ದಾರೆಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಜಿಲ್ಲೆಯ ಮೊದಲ ಹಂತದ 89 ಗ್ರಾಮ ಪಂಚಾಯತಿಗಳ ಒಟ್ಟು 1592 ಸ್ಥಾನಗಳಲ್ಲಿ 41 ಸ್ಥಾನಗಳಿಗೆ ನಾಮಪತ್ರ ಸಲ್ಲಿಸದೇ ಖಾಲಿ ಉಳಿದಿವೆ.

154 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, 3382 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಇದ್ದಾರೆ.

ಜಮಖಂಡಿ ತಾಲೂಕಿನಲ್ಲಿ 1070, ರಬಕವಿ-ಬನಹಟ್ಟಿಯಲ್ಲಿ 791, ಮುಧೋಳ 819, ಬೀಳಗಿ 702 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದರು.

ಮೊದಲ ಹಂತದ ಚುನಾವಣೆಗೆ ಎಲ್ಲ ರೀತಿಯ ಸಿದ್ದತೆಯನ್ನು ಮಾಡಿಕೊಳ್ಳಲಾಗಿದೆ. ಕೋವಿಡ್-19 ಹಿನ್ನಲೆಯಲ್ಲಿ ಸುರಕ್ಷತಾ ಕ್ರಮ ಅನುಸರಿಸಲಾಗುತ್ತಿದೆ. ಚುನಾವಣಾ ಕಾರ್ಯಕ್ಕೆ ನೇಮಕವಾದ ಎಲ್ಲ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ.

ಡಿಸೆಂಬರ 16 ರಂದು ಜಮಖಂಡಿ ಮತ್ತು ಮುಧೋಳ, 17 ರಂದು ರಬಕವಿ-ಬನಹಟ್ಟಿಯಲ್ಲಿ ತರಬೇತಿ ನೀಡಲಾಗುತ್ತಿದೆ. ಜಿಲ್ಲೆಗೆ ಗ್ರಾ.ಪಂ ಚುನಾವಣಾ ವೀಕ್ಷಕರಾಗಿ ಶಶಿಧರ ಕುರೇರ ನೇಮಕಗೊಂಡಿದ್ದು, ಈಗಾಗಲೇ ಜಿಲ್ಲೆಗೆ ಆಗಮಿಸಿ ವೀಕ್ಷಣೆ ಮಾಡುತ್ತಿರುವುದಾಗಿ ತಿಳಿಸಿದರು.

ರಾಜ್ಯದ ಕೆಲವು ಭಾಗದಲ್ಲಿ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳನ್ನು ಹರಾಜು ಹಾಕಿರುವ ಕುರಿತು ವರದಿಯಾಗಿದ್ದು, ಜಿಲ್ಲೆಯಲ್ಲಿ ಅಂತಹ ಹರಾಜು ಪ್ರಕ್ರಿಯೆಗಳು ಕಂಡುಬಂದಲ್ಲಿ ಹರಾಜಿನಲ್ಲಿ ಪಾಲ್ಗೊಳ್ಳುವವರ ವಿರುದ್ದ ಕಾನೂನು ಕ್ರಮಕೈಗೊಳ್ಳಲಾಗುವುದು. ಇನ್ನು ಕೆಲವು ಕಡೆಗಳಲ್ಲಿ ಚುನಾವಣೆಯಿಂದ ಹೊರಗುಳಿಯುವುದು ಹಾಗೂ ಚುನಾವಣೆ ಬಹಿಷ್ಕಾರದಂತಹ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರು ಅಂತಹ ವದಂತಿಗಳಿಗೆ ಕಿವಿಗೊಡದೇ ನ್ಯಾಯಸಮ್ಮತ ಹಾಗೂ ಪಾರದರ್ಶಕ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ ಜಿಲ್ಲೆಯಲ್ಲಿ 2 ಹಂತಗಳಲ್ಲಿ ನಡೆಯಲಿರುವ ಚುನಾವಣೆಗೆ ಮೊದಲನೇ ಹಂತಕ್ಕೆ 1050 ಪೊಲೀಸ್ ಸಿಬ್ಬಂದಿ, ಎರಡನೇ ಹಂತಕ್ಕೆ 1117 ಸಿಬ್ಬಂದಿಗಳನ್ನು ನೇಮಿಸಲಾಗಿದೆ.

ಜಿಲ್ಲೆಯ ಮುಖ್ಯ ರಸ್ತೆಗಳಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೊದಲನೇ ಹಂತದಲ್ಲಿ 5, ಎರಡನೇ ಹಂತದಲ್ಲಿ 6 ಚೆಕ್‍ಪೋಸ್ಟ್‍ಗಳನ್ನು ಹಾಕಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 1564 ರೌಡಿಸೀಟರ್ಸ್ ಹಾಗೂ ಹಳೆಯ ಚುನಾವಣೆಯಲ್ಲಿ ಭಾಗಿಯಾದ ಪ್ರಕರಣಗಳಲ್ಲಿ ದಾಖಲಾದ 366 ಆರೋಪಿತರ ಮೇಲೆ ನಿಗಾವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 905 ಆಯುಧಗಳನ್ನು ಜಮಾ ಮಾಡಿಸಲಾಗಿದೆ. ಮೊದಲನೇ ಹಂತದಲ್ಲಿ 162 ಹಾಗೂ ಎರಡನೇ ಹಂತದಲ್ಲಿ 166 ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.

ವಲಬನ್ ಏರಿಯಾಗಳನ್ನು ಗುರುತಿಸಲಾಗಿದ್ದು, ಸಿಪಿಐ, ಡಿಎಸ್ಪಿಗಳ ಜಂಟಿ ತಂಡ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಎಲ್ಲ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

*4 ಜನ ಗುಣಮುಖ, 6 ಹೊಸ ಪ್ರಕರಣ ದೃಡ*
——————————–
ಬಾಗಲಕೋಟೆ:

ಜಿಲ್ಲೆಯಲ್ಲಿ 4 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 6 ಕೊರೊನಾ ಪ್ರಕರಣಗಳು ಮಂಗಳವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13617 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13420 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 3, ಬಾದಾಮಿ, ಜಮಖಂಡಿ ತಲಾ 1 ಹಾಗೂ ಬೇರೆ ಜಿಲ್ಲೆಯ ಒಬ್ಬರಲ್ಲಿ ಸೋಂಕು ದೃಡಪಟ್ಟಿದ್ದು, ಅವರಿಗೆ ನಿಗದಿತ ಆಸ್ಪತ್ರೆ ಮತ್ತು ಹೋಮ್ ಐಸೋಲೇಷನ್‍ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 640 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 235557 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 220789 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 61 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 

Nimma Suddi
";