This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಕಚೇರಿ ಸ್ವಚ್ಛತೆಗೆ ಹಸಿರು ಶಿಷ್ಠಾಚಾರ : ಸಿಇಓ ಕುರೇರ

ಕಚೇರಿ ಸ್ವಚ್ಛತೆಗೆ ಹಸಿರು ಶಿಷ್ಠಾಚಾರ : ಸಿಇಓ ಕುರೇರ

ಬಾಗಲಕೋಟೆ

ಏಕ ಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆ ಜೊತೆಗೆ ತ್ಯಾಜ್ಯ ಉತ್ಪತ್ತಿಯನ್ನು ಕಡಿಮೆ ಮಾಡಲು ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಚೇರಿಗಳಲ್ಲಿ ಹಸಿರು ಶಿಷ್ಠಾಚಾರ ಅಳವಡಿಕೆಗೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ತಿಳಿಸಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾ ಪಂಚಾಯತಿ ಕಚೇರಿಗಳಲ್ಲಿ ಹಸಿರು ಶಿಷ್ಠಾಚಾರ ಅಳವಡಿಕೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕುಡಿಯುವ ನೀರಿನಿಂದ ಹಿಡಿದು ವಾತಾವರಣ ಸಹ ಕಲುಶಿತವಾಗುತ್ತಿದೆ. ಗ್ರಾಮ, ನಗರ ಹಾಗೂ ಸಾರ್ವಜನಿಕ ಪ್ರದೇಶಗಳನ್ನು ಸ್ವಚ್ಛವಾಗಿಡಬೇಕು. ನಮ್ಮ ಕಛೇರಿಗಳನ್ನು ಮೊದಲು ಸರಿಪಡಿಸಿಕೊಳ್ಳಬೇಕು. ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಬಿಡಬೇಕು. ಬಳಕೆಯಾಗದಂತೆ ನೋಡಿಕೊಳ್ಳಬೇಕು. ಸ್ವಚ್ಛತೆಗೆ ಹೆಚ್ಚು ಒತ್ತು ಕೊಡಬೇಕು. ಈ ನಿಟ್ಟಿನಲ್ಲಿ ಸ್ವಚ್ಛತೆಗೆ ಹಸಿರು ಶಿಷ್ಠಾಚಾರ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಕಚೇರಿಗಳಲ್ಲಿ ಉತ್ತಮ ವಾತಾವರಣ ಇದ್ದರೆ ಮಾತ್ರ ಅಧಿಕಾರಿ ಮತ್ತು ಸಿಬ್ಬಂದಿಗಳು ಚೆನ್ನಾಗಿ ಕೆಲಸ ಮಾಡಲು ಸಾಧ್ಯ. ಇಲ್ಲವಾದಲ್ಲಿ ಕೆಲಸ ಪ್ರಮಾಣ ಸಹ ಕಡಿಮೆಯಾಗುವದರ ಜೊತೆಗೆ ವಿವಿಧ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಪ್ರತಿ ಗ್ರಾಮಗಳಲ್ಲಿ ರಸ್ತೆ ಪಕ್ಕ ಹಾಗೂ ಮನೆಯ ಸುತ್ತ ಮುತ್ತಲು ಪ್ಲಸ್ಟಿಕ್ ರಾಶಿಯನ್ನು ಕಾಣುತ್ತಿದ್ದೇವೆ. ಅದನ್ನು ಕಡೆಗಣಿಸುವ ಕೆಲಸವಾಗಬೇಕು. ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಹಸಿರು ರಾಯಬಾರಿಗಳನ್ನಾಗಿ ನೇಮಿಸಲಾಗಿದೆ ಎಂದರು.

ರೀಚ್ ಸಂಸ್ಥೆಯ ಜಿ.ಎನ್.ಸಿಂಹ ಮಾತನಾಡಿ ಒಣಕಸ, ಹಸಿಕಸ, ಎಕ್ಟ್ರಾನಿಕ್ಸ್ ಕಸ, ಆಸ್ಪತ್ರೆ ಕಸ, ಹಾನಿಕಾರದಿಂದಾಗ ಕಸ ಹೀಗೆ ವಿವಿಧ ರೀತಿಯ ತ್ಯಾಜ್ಯಗಳಿವೆ. ಅವುಗಳನ್ನು ಬೇರ್ಪಡಿಸಿ ಮರು ಬಳಕೆಯಾಗುವಂತೆ ಮಾಡಬೇಕಿದೆ. ಸ್ವಚ್ಛ ಪರಿಸರ ನಿರ್ಮಿಸಬೇಕು. ಒಳ್ಳೇಯ ಅಬ್ಯಾಸ ಇಟ್ಟುಕೊಳ್ಳಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ ಅವರು ಪಂಚಾಯತ ರಾಜ್ ಇಲಾಖೆ ಸುತ್ತೋಲೆ ಮೇರೆಗೆ ಕಚೇರಿಗಳಲ್ಲಿ ಹಸಿರು ಶಿಷ್ಠಾಚಾರ ಅಳವಡಿಕೆ ಅನುಷ್ಠಾನಗೊಳಿಸಲು ಅಭಿಯಾನ ರೂಪದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ. ಇಲಾಖೆಯ ಕಚೇರಿಗಳಲ್ಲಿ ಪ್ಲಾಸ್ಟಿಕ್, ಬಾಟಲ್, ಕ್ಯಾರಿಬ್ಯಾಗ ಬಳಕೆ ಮಾಡಬಾರದು. ಊಟ ಮಾಡಿದ ನಂತರ ವೆಸ್ಟ್‍ನ್ನು ಎನ್ನಂದರಲ್ಲಿ ಹಾಕುವದನ್ನು ತಡೆಯಲು ಕ್ರಮವಹಿಸಬೇಕು. ಇದಕ್ಕಾಗಿ ಜಿ.ಪಂ ಪ್ರಭಾರಿ ಯೋಜನಾ ನಿರ್ದೇಶಕ ಎಸ್.ಎಂ.ಕಾಂಬಳೆ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಇವರನ್ನು ಹಸಿರು ರಾಯಭಾರಿಂಗಳನ್ನಾಗಿ ನೇಮಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಹಸಿರು ಶಿಷ್ಠಾಚಾರದ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ನಿರ್ಮಲ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

*ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯ

ಬಾಗಲಕೋಟೆ ಜಿಲ್ಲೆಯಲ್ಲಿರುವ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ಹಾಗೂ ನಿಯಮಗಳು 1963ರ ಕಲಂ 4(1) ಮತ್ತು (3) ಹಾಗೂ ನಿಯಮ 3ರ ಮೇರೆಗೆ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಈಗಾಗಲೇ ನೋಂದಣಿಯಾಗಿರುವ ಸಂಸ್ಥೆಗಳನ್ನು ಹೊರತು ಪಡಿಸಿ, ಉಳಿದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾರ್ಮಿಕ ನಿರೀಕ್ಷಕರ ಕಛೇರಿ,ಬಾಗಲಕೋಟೆ, ಕಾರ್ಮಿಕ ನಿರೀಕ್ಷಕರ ಕಛೇರಿ ಹುನಗುಂದ, ಕಾರ್ಮಿಕ ನಿರೀಕ್ಷಕರ ಕಛೇರಿ ಮುಧೋಳ, ಕಾರ್ಮಿಕ ನಿರೀಕ್ಷಕರ ಕಛೇರಿ ಜಮಖಂಡಿ, ಕಾರ್ಮಿಕ ನಿರೀಕ್ಷಕರ ಕಛೇರಿ ಬಾದಾಮಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.
15 ದಿನಗಳೊಳಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಇ-ಕಾರ್ಮಿಕ ತಂತ್ರಾಶದಲ್ಲಿ http://www.ekarmika.kanataka.gov.in/ekarmik/static/home.aspx ಆನ್ ಲೈನ್ ಮೂಲಕ ನಿದಧಿತ ಶುಲ್ಕ ಮತ್ತು ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಸಂಸ್ಥೆಗಳ ನೋಂದಣಿ ಪತ್ರ ಪಡೆಯಬಕು. ಹಾಗೆಯೇ ತಮ್ಮ ಸಂಸ್ಥೆಯಲ್ಲಿ ಕೆಲಸಗಾರರು ಇಲ್ಲದಿದ್ದರೂ ಸಹ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ಕಲಂ.4(1) ಮತ್ತು (3) ಹಾಗೂ ನಿಯಮ 3ರ ಮೇರೆಗೆ ಸಂಸ್ಥೆಯನ್ನು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಮಾಡಿಸಿಕೊಳ್ಳಲು ತಪ್ಪಿದ ಸಂಸ್ಥೆಯ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ*

ಬಾಗಲಕೋಟೆ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಆಗಸ್ಟ 31 ರಂದು ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪರುಷುರಾಮ ಶಿನ್ನಾಳಕರ ಹೇಳಿದರು
ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆ 31 ರಂದು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಈ ಮಹನೀಯರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸತಕ್ಕದ್ದು, ಇದಕ್ಕಾಗಿ ನಿಯೋಜಿಸಿದ ಅಧಿಕಾರಿ ಮತ್ತು ಸಿಬ್ಬಂದಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಜನಪ್ರತಿನಿಧಿಗಳಿಗೆ ಶಿಷ್ಠಾಚಾರದಂತೆ ನೀಡಿ ಆಹ್ವಾನಿಸಬೇಕು. ಎಲ್ಲೂ ಕೂಡ ಲೋಪ ದೋಷಗಳಾಗಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದ ನುಲಿಯ ಚಂದಯ್ಯ ಜಯಂತಿಯನ್ನು ಆ.31 ರಂದು ಜಿಲ್ಲಾಡಳಿತ ಭವನ ಆವರಣದಲ್ಲಿ ಬೆಳಿಗ್ಗೆ 9.30ಕ್ಕೆ ಕಲಾತಂಡಗಳೊಂದಿಗೆ ನುಲಿಯ ಚಂದಯ್ಯ ಭಾವಚಿತ್ರ ಮೇರವಣಿಗೆ ಮತ್ತು ಡಾ.ಬಿಆರ್.ಅಂಬೆಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ಹಾಗೂ ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯತ್ ಹಳೆಯ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಮೇಶ ಚವ್ಹಾಣ, ಸಮುಮುದಾಯ ಮುಖಂಡರು ಇದ್ದರು.

Nimma Suddi
";