This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

International NewsLocal NewsSports NewsState News

ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದ ಬೆನ್ನಲ್ಲೇ ಭಾವುಕ ಪೋಸ್ಟ್ ಮಾಡಿದ ಹಾರ್ದಿಕ್​ ಪಾಂಡ್ಯ

ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದ ಬೆನ್ನಲ್ಲೇ ಭಾವುಕ ಪೋಸ್ಟ್ ಮಾಡಿದ ಹಾರ್ದಿಕ್​ ಪಾಂಡ್ಯ

ಮುಂಬಯಿ: ಬಾಂಗ್ಲಾದೇಶ ವಿರುದ್ಧ ನಡೆದ ವಿಶ್ವಕಪ್‌ ಪಂದ್ಯದ (ICC World Cup 2023) ವೇಳೆ ಎಡ ಪಾದಕ್ಕೆ ಗಾಯವಾದ ಕಾರಣ ಹಲವು ಪಂದ್ಯಗಳಿಗೆ ಅಲಭ್ಯರಾಗಿದ್ದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ (Hardik Pandya) ಈಗ ವಿಶ್ವಕಪ್‌ನಿಂದಲೇ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಬಲಿ ಆಟಗಾರನಾಗಿ ಕನ್ನಡಿಗ ಪ್ರಸಿದ್ಧ್​ ಕೃಷ್ಣ(prasidh krishna) ತಂಡ ಸೇರಿದ್ದಾರೆ. ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದ ಬಳಿಕ ಪಾಂಡ್ಯ ತಮ್ಮ ಸಾಮಾಜಿಕ ಜಾಲತಾಣ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಭಾವುಕ ಪೋಸ್ಟ್​ ಒಂದನ್ನು ಮಾಡಿದ್ದಾರೆ.

ತಂಡ ವಿಶ್ವಕಪ್​ ಗೆಲ್ಲಲಿದೆ
“ವಿಶ್ವಕಪ್‌ನ ಉಳಿದ ಭಾಗವನ್ನು ನಾನು ಕಳೆದುಕೊಳ್ಳುತ್ತೇನೆ ಎಂಬ ವಿಚಾರವನ್ನು ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ಆದರೂ ನಾನು ನಮ್ಮ ತಂಡದೊಂದಿಗೆ ಇದ್ದು ಅವರನ್ನು ಹುರಿದುಂಬಿಸುತ್ತೇನೆ. ನನಗೆ ಬೆಂಬಲ ನೀಡಿದ್ದಕ್ಕೆ ಹಾಗೂ ನೀಡುತ್ತಿರುವುದಕ್ಕೆ ಧನ್ಯವಾದಗಳು. ನಮ್ಮ ತಂಡ ವಿಶ್ವಕಪ್ ಎತ್ತಿ ಹಿಡಿಯುತ್ತದೆ ಎಂಬ ವಿಶ್ವಾಸ ನನಗಿದೆ” ಎಂದು ಟ್ವಿಟರ್​ ಎಕ್ಸ್​ನಲ್ಲಿ ಭಾವುಕ ಸಂದೇಶವನ್ನು ಬರೆದಿದ್ದಾರೆ.

“ವಿಶ್ವಕಪ್​ನಲ್ಲಿ ಆಡಿದ ಪ್ರತಿ ಪಂದ್ಯದ ಪ್ರತಿ ಎಸೆತವನ್ನೂ ನಾನು ಆನಂದಿಸುತ್ತೇನೆ. ಬ್ಯಾಟಿಂಗ್​ ಅವವಾಶ ಸಿಕ್ಕಿಲ್ಲವಾದರೂ. ಮೈದಾನದಲ್ಲಿದ್ದ ಪ್ರತಿ ಕ್ಷಣವನ್ನು ಕೂಡ ನಾನು ಚೇತರಿಕೆಯ ಅವಧಿಯಲ್ಲಿ ಆನಂದಿಸಿತ್ತೇನೆ. ದೂರದಿಂದಲೇ ತಂಡದ ಆಟಗಾರರನ್ನು ಹುರಿದುಂಬಿಸುತ್ತೇನೆ. ನಮ್ಮ ಹುಡುಗರು ಎಲ್ಲರನ್ನು ಹೆಮ್ಮೆ ಪಡುವಂತೆ ಮಾಡುತ್ತಾರೆ ಎಂಬ ನಂಬಿಕೆ ನನಗಿದೆ. ಪೀತಿಯಿಂದ ಹಾರ್ದಿಕ್ ಪಾಂಡ್ಯ” ಎಂದು ಲವ್ ಎಮೋಜಿ ಬರೆದುಕೊಂಡಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಉಪನಾಯಕನೂ ಆಗಿರುವ ಹಾರ್ದಿಕ್‌ ಪಾಂಡ್ಯ ಅವರು ಲೀಗ್​ ಪಂದ್ಯಗಳಿಂದ ಹೊರಗುಳಿದು ಸೆಮಿಫೈನಲ್​ನಲ್ಲಿ ಕಣಕ್ಕಿಳಿಯಲಿದ್ದಾರೆ ಎಣದು ವರದಿಗಳು ಕೇಳಿಬಂದಿದ್ದವು. ಆದರೂ, ಅವರು ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅಂತಿಮವಾಗಿ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ.

ಮತ್ತೊಬ್ಬ ಕನ್ನಡಿಗ
ಕನ್ನಡಿಗ, ವೇಗಿ ಪ್ರಸಿದ್ಧ್‌ ಕೃಷ್ಣ ಅವರು ತಂಡಕ್ಕೆ ಆಯ್ಕೆಯಾಗಿದ್ದು ಮತ್ತಷ್ಟು ಬಲ ಬಂದಂತಾಗಿದೆ. ಭಾರತದ ಪರ 17 ಏಕದಿನ ಹಾಗೂ 2 ಟಿ-20 ಪಂದ್ಯಗಳನ್ನು ಆಡಿರುವ ಪ್ರಸಿದ್ಧ್‌ ಕೃಷ್ಣ, ಒಟ್ಟು 33 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಕೆ.ಎಲ್‌.ರಾಹುಲ್‌ ಜತೆಗೆ ವಿಶ್ವಕಪ್‌ ತಂಡಕ್ಕೆ ಆಯ್ಕೆಯಾದ ಮತ್ತೊಬ್ಬ ಕನ್ನಡಿಗ ಎಂಬ ಖ್ಯಾತಿಗೆ ಪ್ರಸಿದ್ಧ್‌ ಕೃಷ್ಣ ಪಾತ್ರರಾಗಿದ್ದಾರೆ.

ಬೌಂಡರಿ ತಡೆಯುವ ಯತ್ನದಲ್ಲಿ ಗಾಯಗೊಂಡಿದ್ದ ಪಾಂಡ್ಯ
ಬಾಂಗ್ಲಾದೇಶ ವಿರುದ್ಧ ಅಕ್ಟೋಬರ್​ 19ರಂದು ಪುಣೆಯಲ್ಲಿ ನಡೆದಿದ್ದ ಪಂದ್ಯದ 9ನೇ ಓವರ್ ಎಸೆಯಲು ಬಂದ ಹಾರ್ದಿಕ್ ಪಾಂಡ್ಯ ಅವರು ಲಿಟನ್ ದಾಸ್ ಬಾರಿಸಿದ ಬೌಂಡರಿ ತಡೆಯುವ ಯತ್ನದಲ್ಲಿ ಸ್ಲಿಪ್ ಆಗಿ ಕೆಳಗೆ ಬಿದ್ದು ಪಾದದ ಗಾಯಕ್ಕೆ ತುತ್ತಾಗಿದ್ದರು. ಬಳಿಕ ನೋವಿನಿಂದಾಗಿ ಮೈದಾನ ತೊರೆದಿದ್ದರು. ಪಾಂಡ್ಯ ಅವರ ಉಳಿದ ಮೂರು ಎಸೆತಗಳನ್ನು ವಿರಾಟ್ ಕೊಹ್ಲಿ ಅವರು ಪೂರ್ಣಗೊಳಿಸಿದ್ದರು. ಗಾಯಗೊಂಡು ಮೈದಾನದಿಂದ ಹೊರ ನಡೆದ ಪಾಂಡ್ಯ ಸಂಪೂರ್ಣವಾಗಿ ಪಂದ್ಯದಿಂದ ಹೊರಗುಳಿದಿದ್ದರು. ಅವರ ಸ್ಥಾನದಲ್ಲಿ ಸೂರ್ಯಕುಮಾರ್​ ಅವರು ಬದಲಿ ಆಟಗಾರನಾಗಿ ಫೀಲ್ಡಿಂಗ್​ ನಡೆಸಿದ್ದರು.

Nimma Suddi
";