This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Politics NewsState News

ಪೆನ್​ಡ್ರೈವ್​ ಕೇಸ್​: ವಿಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾದ ಎಚ್ ಡಿ ಕೆ

ಪೆನ್​ಡ್ರೈವ್​ ಕೇಸ್​: ವಿಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟಕ್ಕೆ ಸಜ್ಜಾದ ಎಚ್ ಡಿ ಕೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದು, ರಾಜಕೀಯ ವಾಗ್ಯುದ್ದಕ್ಕೂ ಕಾರಣವಾಗಿದೆ. ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​​ ಪ್ರಕರಣವನ್ನು ಸಿಬಿಐಗೆ (CBI) ನೀಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್​ ನಾಯಕರು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ರಾಜ್ಯ ಸರ್ಕಾರ ಮಾತ್ರ ಇದಕ್ಕೆ ಒಪ್ಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದು, ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಈಗಾಗಲೆ ತನಿಖೆ ನಡೆಯುತ್ತಿದೆ. ಆದರೆ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣ ಹಾಗೂ ಪೆನ್​​​ಡ್ರೈವ್​​ ಮೂಲಕ ವಿವಿಧಡೆ ಹರಿಬಿಡಲಾಗಿದೆ.

ಹೀಗೆ ಈ ವಿಡಿಯೋಗಳನ್ನು ಹರಿಬಿಟ್ಟು ಮಹಿಳೆಯರ ಮಾನಹಾನಿ ಮಾಡಲಾಗಿದೆ. ಅಷ್ಟೇ ಅಲ್ಲದೆ ಇದರಿಂದ ಹಲವು ಕುಟುಂಬಗಳು ಹಾಳಾಗಿವೆ. ಹೀಗಾಗಿ ವಿಡಿಯೋ ಹರಿಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಲು ಜೆಡಿಎಸ್ ಲೀಗಲ್ ಟೀಮ್ ಈಗಾಗಲೇ ವಕೀಲರ ಜೊತೆ ಮಾತುಕತೆ ನಡೆಸಿದೆ.

ಈ ಪ್ರಕರಣವನ್ನು ವಿಡಿಯೋಗಳನ್ನು ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟ ನಡೆಸಲು ಹೆಚ್​​​ಡಿ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಪ್ರಕರಣವನ್ನು ಸಿಬಿಐಗೆ ನೀಡುವಂತೆ ಹೆಚ್​ಡಿ ಕುಮಾರಸ್ವಾಮಿಯವರು ನ್ಯಾಯಾಲಯದ ಮೂಲಕ ಸರ್ಕಾರದ ಮೇಲೆ ಒತ್ತಡ ತರಲು ತೀರ್ಮಾನಿಸಿದ್ದಾರೆ ಎಂದು ಮಾಹಿತಿ ಕಂಡು ಬಂದಿದೆ.

Nimma Suddi
";