ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರಿಗೆ ಶಾಕ್: ಮೀಸಲಾತಿ ಆದೇಶ ರದ್ದುಗೊಳಿಸಿದ ಹೈ-ಕೋರ್ಟ್
ನಿಮ್ಮ ಸುದ್ದಿ ಬೆಂಗಳೂರು
ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಯ ಅಧ್ಯಕ್ಷರು, ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿಯನ್ನು ರದ್ದುಪಡಿಸುವಂತೆ ಸೂಚಿಸಿರುವ ಹೈ-ಕೋರ್ಟ್ ಏಕ ಸದಸ್ಯ ಪೀಠ, ನಾಲ್ಕು ವಾರಗಳಲ್ಲಿ ಹೊಸ ಮೀಸಲಾತಿ ಪ್ರಕಟಿಸುವಂತೆ ಸರ್ಕಾರಕ್ಕೆ ಆದೇಶ ನೀಡಿದೆ. ಹೈ-ಕೋರ್ಟ್‍ನ ಈ ಆದೇಶ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದವರಿಗೆ ಶಾಕ್ ನೀಡಿದೆ.
ಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ಅವಕಾಶ ಕೋರಿದ್ದು, ಮೇಲ್ಮನವಿ ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಿದೆ. ಮೇಲ್ಮನವಿ ಸಲ್ಲಿಸಿದರೆ ಆಗ ಹೈಕೋರ್ಟ್ ನ ವಿಭಾಗೀಯ ಪೀಠ ನೀಡುವ ತೀರ್ಪು ಅಂತಿಮವಾಗಿರಲಿದೆ ಎಂದು ಕೋರ್ಟ್ ಸೂಚಿಸಿದೆ.