This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Politics NewsState News

ಹೈಕೋರ್ಟ್‌ ತೀರ್ಪು: ಶಾಲೆಯ ಜಾತಿ ದಾಖಲೆ ತಪ್ಪು ತಿದ್ದುವ ಅಧಿಕಾರ ಸಿವಿಲ್‌ ಕೋರ್ಟ್‌ಗಿದೆ

ಹೈಕೋರ್ಟ್‌ ತೀರ್ಪು: ಶಾಲೆಯ ಜಾತಿ ದಾಖಲೆ ತಪ್ಪು ತಿದ್ದುವ ಅಧಿಕಾರ ಸಿವಿಲ್‌ ಕೋರ್ಟ್‌ಗಿದೆ

ಬೆಂಗಳೂರು: ಶಾಲಾ-ಕಾಲೇಜುಗಳ ದಾಖಲೆಗಳಲ್ಲಿ ಜಾತಿ ಕುರಿತಂತೆ ನಮೂದಾಗಿರುವ ತಪ್ಪುಗಳನ್ನು ಸರಿಪಡಿಸಲು ನಿರ್ದೇಶಿಸುವಂತೆ ಕೋರಿದ ದಾವೆಯ ವಿಚಾರಣೆ ನಡೆಸಿ ಆದೇಶ ಪ್ರಕಟಿಸುವ ಅಧಿಕಾರವನ್ನು ಸಿವಿಲ್‌ ನ್ಯಾಯಾಲಯಗಳು ಹೊಂದಿವೆ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಶಾಲಾ-ಕಾಲೇಜು ದಾಖಲೆಗಳಲ್ಲಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿದ ಭೋವಿ ಜಾತಿಗೆ ಬದಲಾಗಿ ಗೌಡ ಎಂದು ನಮೂದಾಗಿರುವುದನ್ನು ಸರಿಪಡಿಸಲು ಕೋರಿ ದಾಖಲಿಸಿದ್ದ ದಾವೆಯನ್ನು ವಿಚಾರಣೆಗೆ ಪರಿಗಣಿಸುವ ಅಧಿಕಾರ ತನಗಿಲ್ಲ ಎಂದು ಸಿವಿಲ್‌ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೊಡಗಿನ ಇಬ್ಬರು ವಿದ್ಯಾರ್ಥಿನಿಯರು ದಾಖಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಂ ಅವರ ಪೀಠ ಈ ತೀರ್ಪು ನೀಡಿದೆ.

ದಾಖಲೆಗಳ ಪ್ರಕಾರ ದಾವೆದಾರ ವಿದ್ಯಾರ್ಥಿನಿಯರು ಭೋವಿ ಸಮುದಾಯಕ್ಕೆ ಸೇರಿದ್ದಾರೆ. ಆ ಕುರಿತು ಅವರಿಗೆ ತಹಸೀಲ್ದಾರ್‌ ಸಹ ಜಾತಿ ಪ್ರಮಾಣ ಪತ್ರ ವಿತರಿಸಿದ್ದಾರೆ. ಜಾತಿ ಪ್ರಮಾಣ ಪತ್ರದ ಮಾನ್ಯತೆಯ ಮೌಲೀಕರಣಕ್ಕೆ ದಾವೆದಾರರು ಕೋರಿಲ್ಲ. ಮೀಸಲು ಕೆಟಗರಿ ಅಥವಾ ಹಿಂದುಳಿದ ವರ್ಗದಡಿ ಸರ್ಕಾರಿ ಉದ್ಯೋಗ ಕೋರಿದ ಸಂದರ್ಭದಲ್ಲಿ ಜಾತಿ ಪ್ರಮಾಣ ಪತ್ರದ ಮಾನ್ಯತೆಯ ಮೌಲೀಕರಣದ ಪ್ರಶ್ನೆ ಉದ್ಭವಿಸುತ್ತದೆ. ಅದರಿಂದ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಮುಂದೆ ಪರಿಹಾರ ಕೋರುವ ಅಗತ್ಯ ಅವರಿಗಿಲ್ಲ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ತಹಸೀಲ್ದಾರ್‌ ವಿತರಿಸಿದ ಜಾತಿ ಪ್ರಮಾಣ ಪ್ರತದ ಆಧರಿಸಿ ಶಾಲಾ-ಕಾಲೇಜುಗಳಲ್ಲಿ ದಾಖಲೆಗಳಲ್ಲಿ ಉಂಟಾಗಿರುವ ದೋಷಗಳನ್ನು ಸರಿಪಡಿಸಲು ದಾವೆದಾರರು ಕೋರಿದ್ದಾರೆ. ಈ ಕುರಿತು ವಿಚಾರಣೆ ನಡೆಸಿ ಪರಿಹಾರ ಕಲ್ಪಿಸುವುದಕ್ಕೆ ಸಿವಿಲ್‌ ನ್ಯಾಯಾಲಯಗಳಿಗೆ ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ ಕಾಯ್ದೆ-1990ರ ನಿಯಮಗಳು ಯಾವುದೇ ಅಡ್ಡಿ ಉಂಟು ಮಾಡುವುದಿಲ್ಲ. ಜಾತಿ ಪ್ರಮಾಣ ಪತ್ರ ಆಧರಿಸಿ ಶಾಲಾ-ಕಾಲೇಜುಗಳ ದಾಖಲೆಗಳಲ್ಲಿ ಉಂಟಾಗಿರುವ ದೋಷ ಸರಿಪಡಿಸಲು ಕೋರಿದ ಮನವಿಯನ್ನು ವಿಚಾರಣೆಗೆ ಪರಿಗಣಿಸಿ ಅಗತ್ಯ ಪರಿಹಾರ ಒದಗಿಸಲು ಸಿವಿಲ್‌ ನ್ಯಾಯಾಲಯ ಅಧಿಕಾರ ವ್ಯಾಪ್ತಿ ಹೊಂದಿದೆ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

Nimma Suddi
";