This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Politics News

ಹಿರೇಮಾಗಿ ಗ್ರಾಪಂ:ಬಿಜೆಪಿ ಮಡಿಲಿಗೆ

ನಿಮ್ಮ ಸುದ್ದಿ ಬಾಗಲಕೋಟೆ

ಬಾಗಲಕೋಟೆ ಮತಕ್ಷೇತ್ರದ ಜಿಪಂ ಅಧ್ಯಕ್ಷೆ ಊರಾದ ಹಿರೇಮಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡೂ ಬಿಜೆಪಿ ಪಾಲಾಗಿವೆ.

ಅಧ್ಯಕ್ಷರಾಗಿ ಸುರೇಶ ಸಂಗಪ್ಪ ರಾಠೋಡ ಹಾಗೂ ಉಪಾಧ್ಯಕ್ಷರಾಗಿ ರೇಣವ್ವ ಹನಮಪ್ಪ ಆಸಂಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ೧೨ ಸದಸ್ಯ ಬಲದ ಗ್ರಾಪಂನಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ ಮಹಿಳೆಗೆ ಮೀಸಲಾಗಿತ್ತು.

ಜಿಪಂ ಅಧ್ಯಕ್ಷೆ ಊರಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿಗರು ಆಯ್ಕೆ ಆಗುತ್ತಾರೆ ಎನ್ನುವ ಮಾತು ಕೇಳಿತ್ತಾದರೂ ಎರಡೂ ಸ್ಥಾನಗಳಿಗೆ ಬಿಜೆಪಿ ಬೆಂಬಲಿತರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು.

ಚುನಾವಣಾಧಿಕಾರಿ ರಾಘು ಪುರೋಹಿತ ಆಯ್ಕೆ ಘೋಷಿಸಿದರು. ಪಿಡಿಒ, ಗ್ರಾಪಂ ಸದಸ್ಯರು ಇದ್ದರು. ಆಯ್ಕೆ ನಂತರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಮುಖಂಡರ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿದರು.