ದೆಹಲಿಯ ಮಾರುಕಟ್ಟೆಯಲ್ಲಿ ಕಾರೊಂದು 15 ಜನರ ಮೇಲೆ ಹರಿದಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಚಾಲಕ ಕುಡಿದ ಅಮಲಿನಲ್ಲಿದ್ದ ಎಂದು ಹೇಳಲಾಗುತ್ತಿದೆ. ಅಪಘಾತದ ವೇಳೆ ಮಾರುಕಟ್ಟೆಯಲ್ಲಿ ಜನಸಾಗರವೇ ನೆರೆದಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಮಾರುಕಟ್ಟೆಯೊಂದರಲ್ಲಿ ವೇಗವಾಗಿ ಬಂದ ಕಾರೊಂದು 15 ಜನರ ಮೇಲೆ ಹರಿದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೂರ್ವ ದೆಹಲಿಯ ಗಾಜಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೂಡಲೇ ಸ್ಥಳದಲ್ಲಿದ್ದವರು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಈ ಪೈಕಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ ಕಾರು ಚಾಲಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆ ಚಾಲಕ ಕುಡಿದ ಅಮಲಿನಲ್ಲಿದ್ದ ಎಂದು ಹೇಳಲಾಗುತ್ತಿದೆ. ಅಪಘಾತದ ವೇಳೆ ಮಾರುಕಟ್ಟೆಯಲ್ಲಿ ಜನಸಾಗರವೇ ನೆರೆದಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವೇಗವಾಗಿ ಬಂದ ಕಾರು ಮಾರುಕಟ್ಟೆಗೆ ಬರುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಈ ವೇಳೆ ಅಂಗಡಿಗಳಲ್ಲಿದ್ದ ಜನರು, ಬೀದಿಬದಿ ವ್ಯಾಪಾರಿಗಳು, ಖರೀದಿದಾರರು ತುಳಿತಕ್ಕೆ ಒಳಗಾಗುತ್ತಿರುವುದ ಕಾಣಬಹುದು. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಮಾರುಕಟ್ಟೆಯಲ್ಲಿದ್ದ ಜನ ಗಲಾಟೆ ಶುರು ಮಾಡಿದರು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಚಿಕಿತ್ಸೆ ವೇಳೆ ಮಹಿಳೆ ಸಾವು ಗಾಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಯೂರ್ ವಿಹಾರ್ 3 ನೇ ಹಂತದ ಬುಧ್ ಬಜಾರ್‌ನಲ್ಲಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳೀಯರು ವಾಹನವನ್ನು ಧ್ವಂಸಗೊಳಿಸಿ ಚಾಲಕನಿಗೆ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.