ದಕ್ಷಿಣ ಕನ್ನಡ: ಆರ್ ಅಶೋಕ್ ಕರ್ನಾಟಕದ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದರು.
ಮಂಗಳೂರಲ್ಲಿ ಮಂಗಳವಾರ ಮಾತನಾಡಿದ ಬಿಕೆ ಹರಿಪ್ರಸಾದ್ ಅವರು, ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲ್ಲ, ನನ್ನ ಹೆಸರು ಎಲ್ಲೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಭಾರತದ ಸಾವಿರಾರು ಭಾಷೆ, ಜಾತಿಗಳನ್ನು ಒಂದಾಗಿ ಕೊಂಡೊಯ್ಯುವ ತತ್ವಸಿದ್ಧಾಂತವನ್ನು ಮಹಾತ್ಮ ಗಾಂಧಿಯವರು ಸರ್ವಧರ್ಮ ಸಮಭಾವ ಎಂದು ಕರೆದರು. ಆ ಸಿದ್ಧಾಂತಕ್ಕಾಗಿ ಅವರು ಪ್ರಾಣವನ್ನೇ ಬಿಟ್ಟರು. ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಈ ದೇಶದ ಮೊಟ್ಟ ಮೊದಲ ಭಯೋತ್ಪಾದಕ ಎಂದರು.
ಈ ದೇಶದಲ್ಲಿ ಭಯೋತ್ಪಾದನೆ ಆರಂಭವಾಗಿದ್ದೇ ಗೋಡ್ಸೆಯಿಂದ ಆಗಿದ್ದು, ಹಿಂದೂಧರ್ಮದ ಮೇಲೆ ನಂಬಿಕೆಯಿಟ್ಟಿದ್ದ ಗಾಂಧಿಯನ್ನು ಕೊಂದ ಹಿಂದೂವನ್ನು ಮತ್ತೆ ಏನೆಂದು ಕರೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದರು.