This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ: ಹೆಚ್​ಡಿ ಕುಮಾಸ್ವಾಮಿ

ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ: ಹೆಚ್​ಡಿ ಕುಮಾಸ್ವಾಮಿ

ಬೆಂಗಳೂರು, ಮೇ 14: ರೇವಣ್ಣಗೆ ಜಾಮೀನು ದೊರೆತಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಆದರೆ, ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ರೇವಣ್ಣರ ಸ್ವಂತ ತಮ್ಮನೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಹೇಳಿದರು.

ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಮತ್ತು ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಕೊನೆಗೂ ರೇವಣ್ಣ ಕುಟುಂಬ ತುಸು ನಿರಾಳವಾಗುವಂತಾಗಿದೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ಹೇಳಿದರು.

ನಿಮಗೆ ಜನ್ಮಕೊಟ್ಟ ತಂದೆ-ತಾಯಿ ಇದ್ದಾರೆ, ಒಡಹುಟ್ಟಿದವರಿದ್ದಾರೆ. ಪೆನ್​​ಡ್ರೈವ್​ ಹಂಚಿದವರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಎಸ್​ಐಟಿ ಅಧಿಕಾರಿಗಳಿಗೆ ಹೇಳಲು ಬಯಸುತ್ತೇನೆ ಎಂದು ಸೂಚಿಸಿದರು.

 

";