ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದ ಮಾತ್ರಕ್ಕೆ ಅದು ಮುಸ್ಲಿಮರೇ ಎಂದು ನೀವು ಅರ್ಥೈಸಿಕೊಳ್ಳುವುದೇಕೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.
ನಾನು ವೋಟ್ ಬ್ಯಾಂಕ್ ರಾಜಕಾರಣ ಮಾಡಲು ಇಲ್ಲಿ ಬಂದಿಲ್ಲ, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಎಲ್ಲಾ ಧರ್ಮದವರನ್ನು ಒಟ್ಟಿಗೆ ಕೊಂಡೊಯ್ಯುವುದೇ ನನ್ನ ಗುರಿ ಎಂದರು.
ನಾನು ಹಿಂದೂ-ಮುಸ್ಲಿಂ ಎಂದು ಭೇದ ಭಾವ ಮಾಡಿದರೆ ಅಂದಿನಿಂದ ನನಗೆ ಸಾರ್ವಜನಿಕ ಕ್ಷೇತ್ರದಲ್ಲಿ ನಿಲ್ಲಲು ಅವಕಾಶವಿರುವುದಿಲ್ಲ ಎಂದು ಹೇಳಿದರು.
ಈದ್ ದಿನಗಳಲ್ಲಿ ನಮ್ಮ ಮನೆಯಲ್ಲಿ ಅಡುಗೆ ಮಾಡುತ್ತಿರಲಿಲ್ಲ, ಮುಸ್ಲಿಂ ಕುಟುಂಬದಲ್ಲಿ ಮಾಡಿದ್ದ ಅಡುಗೆಯನ್ನೇ ಊಟ ಮಾಡುತ್ತಿದ್ದೆವು. ಇಂದಿಗೂ ಅನೇಕ ಮುಸ್ಲಿಂ ಸ್ನೇಹಿತರಿದ್ದಾರೆ ಎಂದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ತಮಗೆ ಮತ ಹಾಕುತ್ತಾರೆಯೇ ಎಂಬ ಪ್ರಶ್ನೆಗೆ ದೇಶದ ಜನತೆ ಮತ ಹಾಕುತ್ತಾರೆ ಎಂದು ಮೋದಿ ಉತ್ತರಿಸಿದರು.
ಹೆಚ್ಚು ಮಕ್ಕಳಿರುವಲ್ಲಿ ಬಡತನವಿದೆ, ನಿಮ್ಮ ಮಕ್ಕಳನ್ನು ಬೇರೆಯವರು ನೋಡಿಕೊಳ್ಳುವ ಪರಿಸ್ಥಿತಿ ಬರಬಾರದು ಎಂದರು. 2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋಧ್ರಾ ಗಲಭೆಯ ನಂತರ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ತಮ್ಮ ವಿರೋಧಿಗಳು ಮುಸ್ಲಿಮರಿಗೆ ನನ್ನ ಮೇಲಿದ್ದ ಗೌರವವನ್ನು ಹಾಳು ಮಾಡುವ ಕೆಲಸ ಮಾಡಿದ್ದಾರೆ.