This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics NewsState News

ಅಪಮಾನಿಸಿರುವ ಎಲ್ಲರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ: ಬಿವೈ ವಿಜಯೇಂದ್ರ

ಅಪಮಾನಿಸಿರುವ ಎಲ್ಲರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ: ಬಿವೈ ವಿಜಯೇಂದ್ರ

ಬೆಂಗಳೂರು: ನಗರದ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಎನ್ಎಸ್​ಯುಐ ಕಾರ್ಯಕರ್ತರು ಮಸಿ ಬಳಿದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.

ಈ ಕುರಿತು ಟ್ವೀಟ್​ ಮಾಡಿದ ಅವರು ““ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್​ ಸಂಸ್ಕೃತಿಗೆ ಈ ಘಟನೆ ಕನ್ನಡಿ ಹಿಡಿದಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಎದ್ದಿರುವ ಜನಾಕ್ರೋಶವನ್ನು ಮರೆಮಾಚಿಕೊಳ್ಳುವ ಉದ್ದೇಶದಿಂದ ಕೆಲ ಕಿಡಿಗೇಡಿ ಯುವಕರನ್ನು ಈ ರೀತಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಲು ಛೂ ಬಿಟ್ಟಿರುವುದು ಈ ನಾಡಿನ ದುರ್ದೈವವಾಗಿದೆ.”

“ಸಾರ್ವಕರ್ ಅವರನ್ನು ಅಪಮಾನಿಸುವ ಸಂದರ್ಭದಲ್ಲಿ ಭಗತ್ ಸಿಂಗ್ ಅವರ ಭಾವಚಿತ್ರ ಪ್ರದರ್ಶಿಸಿರುವ ಕಿಡಿಗೇಡಿಗಳು ಇಬ್ಬರೂ ರಾಷ್ಟ್ರಭಕ್ತರನ್ನು ಏಕಕಾಲದಲ್ಲಿ ಅಪಮಾನಿಸಿದ್ದಾರೆ. ಈ ಕೂಡಲೇ ವೀರ ಸಾವರ್ಕರ್ ಅವರನ್ನು ಅಪಮಾನಿಸಿರುವ ಎಲ್ಲರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ” ಎಂದು ಶಾಸಕ ಬಿವೈ ವಿಜಯೇಂದ್ರ ಆಗ್ರಹಿಸಿದರು.

ಒಬ್ಬ ರಾಷ್ಟ್ರಭಕ್ತನನ್ನು ಅಪಮಾನಿಸಲು ಮತ್ತೊಬ್ಬ ರಾಷ್ಟ್ರಭಕ್ತನ ಭಾವಚಿತ್ರವನ್ನು ಗುರಾಣಿಯಂತೆ ಬಳಸಿಕೊಂಡು ಯಲಹಂಕದ ವೀರ್ ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಎನ್.ಎಸ್.ಯು.ಐ ಕಿಡಿಗೇಡಿಗಳು ಮಸಿ ಬಳಿದು ಅಪಮಾನ ಮಾಡಿ ವಿಕೃತಿ ಮೆರೆದಿರುವ ಘಟನೆ ಅತ್ಯಂತ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Nimma Suddi
";