ಹಿಮಾಚಲ: ನಾನು ರಾಜೀನಾಮೆ ನೀಡಿಲ್ಲ, ನನ್ನ ಬಳಿ ರಾಜೀನಾಮೆ ನೀಡಿ ಎಂದು ಯಾರೂ ಕೇಳಿಲ್ಲ, ವದಂತಿಯನ್ನು ನಂಬಬೇಡಿ’’ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದರು.
ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಆರು ಮಂದಿ ಶಾಸಕರು ಬಿಜೆಪಿಗೆ ಅಡ್ಡಮತದಾನ ಮಾಡಿರುವ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಉರುಳಲಿದೆ ಎನ್ನುವ ಮಾತುಗಳು ಕೇಳಿಬಂದಿದ್ದು, ಅಭ್ಯರ್ಥಿ ಹರ್ಷ್ ಮಹಾಜನ್ ಅವರು ಕಾಂಗ್ರೆಸ್‌ನ ಅಭಿಷೇಕ್ ಮನು ಸಿಂಘ್ವಿ ಅವರನ್ನು ಆಡಳಿತಾರೂಢ ಕಾಂಗ್ರೆಸ್‌ನ ಆರು ಶಾಸಕರು ಅಡ್ಡ ಮತದಾನ ಮಾಡಿದ ಕಾರಣ ಸುಲಭವಾಗಿ ಸೋಲಿಸಿದರು.
68 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಮತ್ತು ಬಿಜೆಪಿ 25 ಶಾಸಕರನ್ನು ಹೊಂದಿದೆ. ಉಳಿದ ಮೂರು ಸ್ಥಾನಗಳನ್ನು ಸ್ವತಂತ್ರರು ಹೊಂದಿದ್ದಾರೆ.
ಒಂದು ಕಡೆ ಬಿಜೆಪಿಯು ಅವಿಶ್ವಾಸ ನಿರ್ಣಯಕ್ಕೆ ಪಟ್ಟು ಹಿಡಿದಿದೆ. ಈ ನಡುವೆ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ 15 ಬಿಜೆಪಿ ಶಾಸಕರನ್ನು ಸ್ಪೀಕರ್ ವಿಧಾನಸಭೆಯಿಂದ ಅಮಾನತುಗೊಳಿಸಿದ್ದಾರೆ.
ಮಾಜಿ ಸಿಎಂ ಜೈ ರಾಮ್ ಠಾಕೂರ್, ವಿಪಿನ್ ಸಿಂಗ್ ಪರ್ಮಾರ್, ರಣಧೀರ್ ಶರ್ಮಾ, ಲೋಕೇಂದರ್ ಕುಮಾರ್, ವಿನೋದ್ ಕುಮಾರ್, ಹನ್ಸ್ ರಾಜ್, ಜನಕ್ ರಾಜ್, ಬಲ್ಬೀರ್ ವರ್ಮಾ, ತ್ರಿಲೋಕ್ ಜಮ್ವಾಲ್, ಸುರೇಂದರ್ ಶೋರಿ, ದೀಪ್ ರಾಜ್, ಪುರಣ್ ಠಾಕೂರ್, ಇಂದರ್ ಸಿಂಗ್ ಗಾಂಧಿ, ದಿಲೀಪ್ ಠಾಕೂರ್ ಮತ್ತು ಇಂದರ್ ಸಿಂಗ್ ಗಾಂಧಿ ಸೇರಿದ್ದಾರೆ.ಬಿಜೆಪಿ ಶಾಸಕರನ್ನು ಸದನದಿಂದ (ಹಿಮಾಚಲ ಪ್ರದೇಶ ಅಸೆಂಬ್ಲಿ) ಅಮಾನತುಗೊಳಿಸಿದ ರೀತಿ, ಇದು ಸಂಪೂರ್ಣವಾಗಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ.