ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿರುವ ಇನ್ಫೋಸಿಸ್ ಟೆಕ್ನಾಲಜೀಸ್ ಸಂಸ್ಥೆಯ ಅಧಿಕಾರಿಗಳ ಜೊತೆ ಸಭೆ ನಡೆಸುವುದಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಭರವಸೆ ನೀಡಿದರು.
ಸದನದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, ಶೀಘ್ರವೇ ಸಭೆಯನ್ನು ಆಯೋಜಿಸಲಾಗುವುದು ಎಂದು ಹೇಳಿದ್ದು,ವಿಧಾನ ಪರಿಷತ್ ನಲ್ಲಿ ಮಂಗಳವಾರ ಬಿಜೆಪಿಯ ಶಾಸಕ ಎಸ್.ವಿ.ಶಂಕನೂರು ಪಾಟೀಲ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಾಟೀಲ್, ” ಯಾವ ಉದ್ದೇಶಕ್ಕಾಗಿ ಜಮೀನನ್ನು ಪಡೆದುಕೊಳ್ಳಲಾಗಿತ್ತೋ, ಅದರ ಪ್ರಕಾರ ಸಂಸ್ಥೆ ಕಾರ್ಯನಿರ್ವಹಿಸದೇ ಇದ್ದ ಪಕ್ಷದಲ್ಲಿ ಜಮೀನನ್ನು ಹಿಂದಕ್ಕೆ ಪಡೆಯಲಾಗುವುದು”ಎಂದು ತಿಳಿಸಿದರು.
ಇನ್ಫೋಸಿಸ್ ಸಂಸ್ಥೆಯು ಜಮೀನು ಮಂಜೂರು ಮಾಡಿಸಿಕೊಂಡಿದ್ದು ಒಂದು ಉದ್ದೇಶಕ್ಕಾಗಿ, ಆದರೆ ಅಲ್ಲಿ ಈಗ ತೋಟಗಾರಿಕೆಗೆ ಸಂಬಂಧ ಪಟ್ಟ ಕೆಲಸಗಳು ನಡೆಯುತ್ತಿವೆ. ನಾನು ಕೂಡಾ ಇನ್ಫೋಸಿಸ್ ಕ್ಯಾಂಪಸ್ ಗೆ ಭೇಟಿ ನೀಡಿ ವಸ್ತುಸ್ಥಿತಿ ಅವಲೋಕಿಸುತ್ತೇನೆ ” ಎಂದು ಸೂಚಿಸಿದರು.