ವಿಜಯಪುರ: ಬಿಜೆಪಿ ಅಭ್ಯರ್ಥಿ ರಮೇಶ್ ಜಿಗಜಿಣಗಿ ವಿಜಯಪುರ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರತಿ ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಅಂತರ ಹೆಚ್ಚುತ್ತಾ ಸಾಗಿದೆ, ಎಂದು ಮಾಹಿತಿ ತಿಳಿದು ಬಂದಿದೆ.
ಈ ಬಾರಿ 2 ಲಕ್ಷಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಜಿಗಜಿಣಗಿ ಗೆಲುವು ಸಾಧಿಸಲಿದ್ದಾರೆ. 1996ರಲ್ಲಿ ಸೋತ ಬಳಿಕ ತಾನು ಎರಡು ಬಾರಿ ಸಂಸತ್ತಿಗೆ ಆಯ್ಕೆಯಾಗಿರುವುದಾಗಿ ತಿಳಿಸಿದ ಯತ್ನಾಳ್ ಅಲ್ಲಿಂದೀಚೆಗೆ ಜಿಜಜಿಣಗಿ ನಿರಂತರವಾಗಿ ಗೆಲ್ಲುತ್ತಿದ್ದಾರೆ. ವಿಜಯಪುರದ ಮತದಾರರು ಪ್ರಜ್ಞಾವಂತರು ಮತ್ತು ಪ್ರಬುದ್ಧರು; ಲೋಕಸಭೆ, ವಿಧಾನಸಭೆ ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಯಾರನ್ನು ಆರಿಸಬೇಕು ಅಂತ ಅವರಿಗೆ ಚೆನ್ನಾಗಿ ಗೊತ್ತಿದೆ ಎಂದರು.
ಭಾರತ ಅಭಿವೃದ್ಧಿ ಪಥದಲ್ಲಿ ಮುಂದುವರಿಯಬೇಕು, ಒಂದು ಸುಭದ್ರ ಮತ್ತು ಬಲಿಷ್ಠ ರಾಷ್ಟವಾಗಬೇಕು ಮತ್ತು ಮುಂದಿನ 5 ವರ್ಷಗಳಲ್ಲಿ ಭಾರತ ಜಗತ್ತಿನ ಮೂರನೇ ಅತಿದೊಡ್ಡ ಎಕಾನಮಿಯಾಗಬೇಕಾದರೆ ಅದು ಕೇವಲ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ ಅನ್ನೋದನ್ನು ಅವರು ಅರ್ಥ ಮಾಡಿಕೊಂಡಿದ್ದಾರೆ, ಹಾಗಾಗಿ ವಿಜಯಪುರ ಜನ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.