This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Education NewsLocal NewsState News

ಗ್ರಾಮ ಆರೋಗ್ಯ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ

ಗ್ರಾಮ ಆರೋಗ್ಯ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ

*ಗ್ರಾಮ ಆರೋಗ್ಯ ಕುರಿತು 2 ದಿನ ತರಬೇತಿ ಕಾರ್ಯಾಗಾರ*

ಬಾಗಲಕೋಟೆ:

ಗ್ರಾಮೀಣ ಭಾಗದ ಜನರ ದೃಷ್ಠಿಯಿಂದ ಇಟ್ಟುಕೊಂಡು ರೂಪಿಸಲಾದ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಬೇಕೆಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ತಿಳಿಸಿದರು.

ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಬುಧವಾರ ಗ್ರಾಮ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಹಿನ್ನಲೆಯಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಎರಡು ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗ್ರಾಮ ಆರೋಗ್ಯ ಒಂದು ಮಹತ್ವದ ಯೋಜನೆಯಾಗಿದ್ದು, ವಿವಿಧ ಇಲಾಖೆಗಳ ಜೊತೆಗೂಡಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಕಾರ್ಯಕ್ರಮದ ಉಸ್ತುವಾರಿ ಗ್ರಾ.ಪಂ ಗ್ರಾ.ಪಂ ಟಾಸ್ಕಪೋರ್ಸ ಸದಸ್ಯರ ಹಾಗೂ ಪಂಚಾಯತ ಅಭಿವೃದ್ದಿ ಅಧಿಕಾರಿಗಳ ಪಾತ್ರ ಮುಖ್ಯವಾಗಿದೆ ಎಂದರು.

ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಯೋಗದಲ್ಲಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಗ್ರಾಮೀಣ ಜನರ ಆರೋಗ್ಯ ತಪಾಸಣೆ ಮಾಡುವುದರ ಮುಖಾಂತರ ಗ್ರಾಮೀಣ ಜನರ ಆರೋಗ್ಯ ವಿಶೇಷವಾಗಿ ಮಹಿಳೆಯರ ಆರೋಗ್ಯಕ್ಕೆ ಈ ಯೋಜನೆ ಸಹಕಾರಿಯಾಗಿದೆ. ಇಂತಹ ವಿನೂತನ ಯೋಜನೆಯನ್ನು ಕೆ.ಎಚ್.ಪಿ.ಟಿ ಸಂಸ್ಥೆಯವರು ಯೋಜನೆ ಅನುಷ್ಠಾನಗೊಳಿಸಿ ತಾಂತ್ರಿಕ ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಸಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಹಾಗೂ ಕ್ಷಯ ರೋಗ ನಿರ್ಮೂಲನೆ, ಬಾಲ್ಯ ವಿವಾಹ ತಡೆಗಟ್ಟುವಿಕೆ, ರಕ್ತಹೀನತೆ, ಮಾನಸಿಕ ಆರೋಗ್ಯ ಹೀಗೆ ವಿವಿಧ ಇಲಾಖೆಗಳ ಜೊತೆಗೂಡಿ ಗ್ರಾಮ ಆರೋಗ್ಯ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕಿದೆ. ಆದ್ದರಿಂದ ಜಿಲ್ಲಾ ಮಟ್ಟದಲ್ಲಿ ಎರಡು ದಿನಗಳವರೆಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಸದುಪಯೋಗವನ್ನು ಪಡೆದುಕೊಂಡು ಪಂಚಾಯಿತಿ ಮಟ್ಟದಲ್ಲಿ ತರಬೇತಿ ನೀಡಲು ಸಜ್ಜಾಗಬೇಕಿದೆ ಎಂದರು.

ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ ಮಾತನಾಡಿ ಗ್ರಾಮ ಆರೋಗ್ಯ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿ ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಯ ಒಗ್ಗೂಡುವಿಕೆ ಪ್ರಮುಖವಾಗಿದ್ದು, ಯೋಜನೆಯ ರೂಪಿಸುವಲ್ಲಿ ಪಂಚಾಯಿತಿ ಮಟ್ಟದಲ್ಲಿ ಕ್ರೀಯಾ ಯೋಜನೆಯನ್ನು ಸಿದ್ಧಪಡಿಸಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ವರ್ಗಕ್ಕೆ ಒಂದು ಬಾರಿಯಾದರೂ ಆರೋಗ್ಯ ತಪಾಸಣೆಯ ಮಾಡಿಸಿಕೊಳ್ಳುವಂತೆ ಅರಿವು ಕಾರ್ಯಕ್ರಮಗಳನ್ನು ನೀಡಿ ಜನರನ್ನು ತಪಾಸಣೆಗೆ ಒಳಪಡಿಸುವುದು ಪ್ರಮುಖ ಜವಾಬ್ದಾರಿಯಾಗಿದೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆ.ಎಚ್.ಪಿಟಿ ಸಂಸ್ಥೆಯ ಬೆಳಗಾವಿ ವಲಯ ಸಂಯೋಜಕರಾದ ಡಾ.ಭಾರತಿ ತರಬೇತಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಂಪನ್ಮೂಲ ವ್ಯಕ್ತಿಗಳು, ಎಸ್.ಐ.ಆರ್.ಡಿ ಕೇಂದ್ರೀಕೃತ ತರಬೇತಿ ಸಂಯೋಜಕರು, ಕೆ.ಎಚ್.ಪಿ.ಟಿ ಸಂಸ್ಥೆಯ ಸಿಬ್ಬಂದಿ ಹಾಗೂ ಜಿಲ್ಲಾ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

";