This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

Local NewsState News

ಜಿಲ್ಲಾಡಳಿತದಿಂದ ಪರಿನಿರ್ವಾಹಣ ದಿನ ಆಚರಣೆ

ಜಿಲ್ಲಾಡಳಿತದಿಂದ ಪರಿನಿರ್ವಾಹಣ ದಿನ ಆಚರಣೆ

ಬಾಗಲಕೋಟೆ:

ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ ಪರಿನಿರ್ವಾಹಣಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಜಿ.ಪಂ ಸಿಇಓ ಶಶೀಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ಅವರು ಮಾಲಾರ್ಪಣೆ ಮಾಡಿ ಪುಷ್ಪ ಅರ್ಪಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಪುನಿತ್, ಯೋಜನಾಧಿಕಾರಿ ಎನ್.ವಾಯ್.ಬಸರಿಗಿಡದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮ ಉಕ್ಕಲಿ, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್.ಕರಡಿಗುಡ್ಡ, ಜಿಲ್ಲಾ ಆಯುಷ ಅಧಿಕಾರಿ ಅಕ್ಕಮಹಾದೇವಿ ಗಾಣಿಗೇರ, ಜಿ.ಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ನಗರಸಭೆ ಪೌರಾಯುಕ್ತ ರಮೇಶ ಜಾದವ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

*ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ*
———————————
ಬಾಗಲಕೋಟೆ: ಬಾಗಲಕೋಟೆ ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳಿಂದ ಹಾಗೂ ಸಾರ್ವಜನಿಕರು ನಾಯಿಗಳನ್ನು ಬೀದಿಗೆ ಬಿಡುಗದರಿಂದ ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿ ಸಾರ್ವಜನಿಕರಿಗೆ ಸ್ವಚ್ಚತೆ ಮತ್ತು ಆರೋಗ್ಯಕ್ಕೆ ಹಾನಿಕಾರಕವಾಗಿರುತ್ತದೆ. ಅಲ್ಲದೇ ಸಾರ್ವಜನಿಕರಿಗೆ ಮತ್ತು ವಾಹನಗಳ ಸಂಚಾರಕ್ಕೆ ತೊಂದರೆಯಾಗುವದಲ್ಲದೇ ಅಪಘಾತಕ್ಕೆ ಕಾರಣವಾಗಬಹುದು. ಆದ್ದರಿಂದ ನಾಯಿಯ ಮಾಲಿಕರು ನಾಯಿಗಳನ್ನು ತಮ್ಮ ಮಾಲ್ಕಿಯ ಜಾಗೆಯ ನಾಯಿ ಬೇಲಿಯಲ್ಲಿಡುವುದು ಅದರಂತೆ ಸಾರ್ವಜನಿಕ ಸ್ಥಳಗಳಲ್ಲಿ ಬಿಡುವ ಸಮಯದಲ್ಲಿ ತಮ್ಮ ಹೆಸರಿನ ಕೊರಳಿನ ಪಟ್ಟಿಯನ್ನು ಅಳವಡಿಸತಕ್ಕದ್ದು. ಇಲ್ಲವಾದಲ್ಲಿ ಇದು ಪುರಸಭೆ ಕಾಯ್ದೆ-1964 ನಿಯಮ 222ರ ಉಲ್ಲಂಘನೆಯಾಗಿರುತ್ತದೆ. ತಪ್ಪಿದಲ್ಲಿ ಪುರಸಭೆ ಕಾಯ್ದೆ 1964 ಪ್ರಕಾರ ಕ್ರಮಜರುಗಿಸಲಾಗುವುದೆಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ನಿಗಮದ ವಿವಿಧ ಸೌಲಭ್ಯ : ಅರ್ಜಿ ಅವಧಿ ವಿಸ್ತರಣೆ*
——————————————-
ಬಾಗಲಕೋಟೆ: ಡಾ.ಬಿ.ಆರ್ ಅಂಬೇಡ್ಕರ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ-ಒಡೆತನ ಯೋಜನೆಗಳಡಿ ಅರ್ಹ ಫಲಾಪೇಕ್ಷೀಗಳಿಂದ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ಡಿಸೆಂಬರ 15 ವರೆಗೆ ವಿಸ್ತರಿಸಲಾಗಿರುತ್ತದೆ. ಅರ್ಜಿಗಳನ್ನು ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕೊಠಡಿ ನಂ.201, ಜಿಲ್ಲಾ ಆಡಳಿತ ಭವನ, ನವನಗರ, ಬಾಗಲಕೋಟೆ ಅವರನ್ನು ಸಂಪರ್ಕಿಸಬಹುದಾಗಿದೆ.

*ಕರ್ನಾಟಕ ಕ್ರೀಡಾ ಪೋಷಕರ ಪ್ರಶಸ್ತಿಗೆ ಅರ್ಜಿ*
————————————-
ಬಾಗಲಕೋಟೆ:  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2023-24 ನೇ ಸಾಲಿಗೆ ರಾಜ್ಯದ ಕ್ರೀಡಾ ಪೋಷಕರಿಗೆ ಪೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕ್ರೀಡಾ ಪೋಷಕರನ್ನು ಗುರುತಿಸಿ ತಲಾ 5 ಲಕ್ಷ ರೂ.ಗಳ ನಗದು ಬಹುಮಾನವನ್ನು ನೀಡಿ ಕರ್ನಾಟಕ ಕ್ರೀಡಾ ಪೆÇೀಷÀಕ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. (ಕ್ರೀಡಾ ಸಾಧನೆ ಪ್ರಸ್ತಾವನೆ ವರದಿ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು). ಕರ್ನಾಟಕ ನಿವಾಸಿಗಳಲ್ಲದ ಹಾಗೂ ರಾಜ್ಯದ ಕ್ರೀಡಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರದೇ ಇರುವ ಕ್ರೀಡಾ ಪೋಷಕರುಗಳು ಈ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ. ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂಬ ಬಗ್ಗೆ ಪೊಲಿಸ್ ವೆರಿಫಿಕೆಷನ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಆಸಕ್ತ ಕ್ರೀಡಾ ಪೋಷಕರು ನಿಗದಿತ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವ ಅರ್ಜಿ ಅವಧಿಯನ್ನು ಡಿಸೆಂಬರ 8 ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂಸಂ.08354-235896, 9945284771ಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Nimma Suddi
";