This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಹೆಬ್ಬಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹರಿಸಿದ ಜಿಲ್ಲಾಧಿಕಾರಿ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಹೊತ್ತು ತಂದ ಗ್ರಾಮಸ್ಥರ ಅಹವಾಲು ಮತ್ತು ಸಮಸ್ಯೆಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಸ್ಥಳದಲ್ಲಿಯೇ ಪರಿಹಾರ ನೀಡುವ ಕಾರ್ಯವನ್ನು ಮಾಡಿದರು.

ಹೆಬ್ಬಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಗ್ರಾಮಸ್ಥರ ಅಹವಾಲು ಹಾಗೂ ಸಮಸ್ಯೆಗಳನ್ನು ಆಲಿಸುವ ಮೂಲಕ ಪರಿಹರಿಸುವ ಕಾರ್ಯ ಮಾಡಿದರು. ಗ್ರಾಮಸ್ಥರಿಂದ ಸಮಸ್ಯೆಗಳಿಗೆ ಸ್ಪಂದಿಸಿz ಜಿಲ್ಲಾಧಿಕಾರಿಗಳು ಎಂ.ಎಲ್.ಬಿ.ಸಿ ಕಾಲುವೆ ಸಂಬಂಧಿಸಿದಂತೆ ಭೂಸ್ವಾಧೀನ ಕುರಿತ ತಿದ್ದುಪಡಿ, ಕಾಲುವೆ ಅನುದಾನ ಕುರಿತು ನಿರ್ದೇಶನ ನೀಡಿದರು.

ಗ್ರಾಮದಲ್ಲಿರುವ ವಿದ್ಯುತ್ ಕಂಬಗಳು ಶಿಥಿಲಗೊಂಡಿದ್ದು, ಅವುಗಳನ್ನು ಸರಿಪಡಿಸಲು ಬಾದಾಮಿ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು.

ಅಕ್ರಮ-ಸಕ್ರಮದಡಿ ಬಂದ ಅಕತಗಳ ಅರ್ಜಿಗಳನ್ನು ವಿಲೇವಾರಿಯನ್ನು ತುರ್ತಾಗಿ ಪರಿಹರಿಸಲು ಸೂಚಿಸಿದರು. ದೇವದಾಸಿ ಮಗಳೆಂದು ಹೇಳಿಕೊಂಡು ಬಂದ ಮಹಿಳೆಗೆ ಸ್ವ-ಉದ್ಯೋಗ ಕೈಗೊಳ್ಳಲು ಸಹಾಯಧನದ ಸೌಲಭ್ಯ ಒದಗಿಸುವಂತೆ ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು.

ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿನ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವವರು ಖಾನಂ ಕೆಲಸಕ್ಕಾಗಿ ಮನವಿ ಸಲ್ಲಿಸಿದರು. ಶೌಚಾಲಯ ಹಾಗೂ ಬೆಳಕಿನ ವ್ಯವಸ್ಥೆಗೆ ಮಹಿಳೆಯರು ಅಳಲನ್ನು ತೋಡಿಕೊಂಡಾಗ ತಕ್ಷಣ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.ಮುಮ್ಮರಡ್ಡಿ ಕೊಪ್ಪ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.

ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶಿವಾನಂದ ಪಟ್ಟಣಶೆಟ್ಟಿ, ಬಾದಾಮಿ ತಹಶೀಲ್ದಾರ ಜಿ.ಬಿ.ಮಜ್ಜಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಮಲ್ಲಿಕಾರ್ಜುನ ಕಲಾದಗಿ ಸ್ವಾಗತಿಸಿದರು. ಆರೀಪ ಬಿರಾದಾರ, ಸದಾಶಿವ ಮರಡಿ ಕಾರ್ಯಕ್ರಮ ನಿರೂಪಿಸಿದರು.

ನಂತರ ಗ್ರಾಮ ಸಂಚಾರ ಮಾಡಿ ಹರಿಜನ ಕಾಲೋನಿ, ಅಂಗನವಾಡಿ ಕೇಂದ್ರ, ನ್ಯಾಯಬೆಲೆ ಅಂಗಡಿ ಹಾಗೂ ಗ್ರಾಮ-1 ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಾರಂಭದಲ್ಲಿ ಗ್ರಾಮದ ಮಹಿಳೆಯರು ಆರತಿ ಮಾಡುವ ಮೂಲಕ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ನಂತರ ಡೊಳ್ಳಿನ ತಂಡದ ಮಜಲಿನ ಮೂಲಕ ಗ್ರಾಮಕ್ಕೆ ಬರಮಾಡಿಕೊಂಡರು. ಪ್ರಾದೇಶಿಕ ಮತ್ತು ಸಾಮಾಜಿಕ ಅರಣ್ಯ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಪಶು ಸಂಗೋಪನೆ ಹಾಗೂ ತೋಟಗಾರಿಕೆ ಇಲಾಖೆಗಳು ಹಮ್ಮಿಕೊಂಡಿದ್ದ ಪ್ರದರ್ಶನ ಮಳಿಗೆಗಳ ಉದ್ಘಟಿಸಿದರು.

*ವಿವಿಧ ಸೌಲಭ್ಯಗಳ ವಿತರಣೆ*
——————–
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಸೌಲಭ್ಯಗಳಾದ ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮಾಶಾಸನಗಳ ಮಂಜೂರಾತಿ ಪತ್ರ, ಮೇವಿನ ಬೀಜಗಳ ಕಿರುಪೊಟ್ಟಣಗಳ ವಿತರಣೆ, ಸುಕನ್ಯ ಸಮೃದ್ದಿ ಯೋಜನೆ ಫಲಾನುಭವಿಗಳಿಗೆ ಪಾಸ್‍ಬುಕ್‍ಗಳು ಸೇರಿದಂತೆ ಇತರೆ ಇಲಾಖೆಗಳ ಸೌಲಭ್ಯಗಳನ್ನು ಜಿಲ್ಲಾಧಿಕಾರಿಗಳು ವಿತರಣೆ ಮಾಡಿದರು.

Nimma Suddi
";