This is the title of the web page
This is the title of the web page

Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

State News

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ಧರಾಗಿರಬೇಕು: ಅಧಿಕಾರಿಗಳಿಗೆ ಸಿಎಂ ಸಿದ್ದು ಸೂಚನೆ

ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ಧರಾಗಿರಬೇಕು: ಅಧಿಕಾರಿಗಳಿಗೆ ಸಿಎಂ ಸಿದ್ದು ಸೂಚನೆ

ಬೆಂಗಳೂರು : ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ಧರಾಗಿರಬೇಕು, ಇಲ್ಲದಿದ್ದರೆ ಅಂತಹವರು ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಎಚ್ಚರಿಕೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಅವರು, ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕಿದ್ದು, ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದರು

ಅಧಿಕಾರಿಗಳ ಅನುಭವಗಳು ಸರ್ಕಾರದ ಕಲ್ಯಾಣ ಮತ್ತು ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸಲು ಜಿಲ್ಲಾಡಳಿತಗಳಿಗೆ ಸಹಾಯ ಮಾಡುತ್ತಿದ್ದು, ಜಿಲ್ಲೆಗಳಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿಂದ ಗ್ಯಾರಂಟಿ ಯೋಜನೆಗಳ ಲಾಭ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಇಂತಹ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಸಹಕರಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾಧಿಕಾರಿಗಳು ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು. ನಿಮ್ಮ ಮಟ್ಟದಲ್ಲಿ ಯಾವುದೇ ಸಮಸ್ಯೆ ಬಗೆಹರಿಯದಿದ್ದರೆ ಮುಖ್ಯ ಕಾರ್ಯದರ್ಶಿಗೆ ತಿಳಿಸಿ, ನಿಯಮ ಉಲ್ಲಂಘಿಸುವ ಜಿಲ್ಲಾ ಮಟ್ಟದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೆಲಸದಲ್ಲಿ ಶಿಸ್ತು ಕಾಪಾಡಲು ಸಾಧ್ಯವಿಲ್ಲ ಎಂದರು.

 

Nimma Suddi
";