This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

National NewsPolitics News

ಕಳೆದ 10 ವರ್ಷಗಳಲ್ಲಿ ನಾವು ಭಾರತವನ್ನು ವಿಶ್ವದ 5 ನೇ ಅತಿದೊಡ್ಡ ಆರ್ಥಿಕ ಸೂಪರ್ ಪವರ್ ದೇಶವನ್ನಾಗಿ ಮಾಡಿದ್ದೇವೆ: ಪ್ರಧಾನಿ ಮೋದಿ

ಕಳೆದ 10 ವರ್ಷಗಳಲ್ಲಿ ನಾವು ಭಾರತವನ್ನು ವಿಶ್ವದ 5 ನೇ ಅತಿದೊಡ್ಡ ಆರ್ಥಿಕ ಸೂಪರ್ ಪವರ್ ದೇಶವನ್ನಾಗಿ ಮಾಡಿದ್ದೇವೆ: ಪ್ರಧಾನಿ ಮೋದಿ

ಲಖನೌ: ಕಳೆದ 10 ವರ್ಷಗಳಲ್ಲಿ ನಾವು ಭಾರತವನ್ನು ವಿಶ್ವದ 5 ನೇ ಅತಿದೊಡ್ಡ ಆರ್ಥಿಕ ಸೂಪರ್ ಪವರ್ ದೇಶವನ್ನಾಗಿ ಮಾಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಚುನಾವಣಾ ಪ್ರಚಾರ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಭಾರತ ವಿಶ್ವದ ಅಗ್ರ 15 ಆರ್ಥಿಕತೆಗಳಲ್ಲಿ ಒಂದಾಗಿತ್ತು. ನಾವು ಅಧಿಕಾರಕ್ಕೆ ಬಂದು 10 ವರ್ಷಗಳಲ್ಲಿ ದೇಶವು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದರು.

ಸರ್ಕಾರದ ಕಾರ್ಯಕ್ರಮಗಳು ದೇಶದ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪಬೇಕು ಎಂದು ನಾವು ಭಾವಿಸುತ್ತೇವೆ. ಸರ್ಕಾರದ ಯೋಜನೆಗಳು ಫಲಾನುಭವಿಗಳೆಲ್ಲರಿಗೂ ತಲುಪಬೇಕು ಎಂದು ಮೋದಿ ಹೇಳಿದರು.

ಎಲ್ಲ ಬಡವರಿಗೆ ಮನೆ, ಗ್ಯಾಸ್ ಸಂಪರ್ಕ ನೀಡಲಾಗಿದ್ದು, ಎಲ್ಲ ಮನೆಗಳಿಗೂ ನಲ್ಲಿ ನೀರು ನೀಡುತ್ತಿದ್ದೇವೆ. ಅಷ್ಟೇ ಅಲ್ಲ, ನಾವು ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ತಂದಿದ್ದೇವೆ. ಮುಸ್ಲಿಂ ಮಹಿಳೆಯರು ಮಾತ್ರವಲ್ಲ, ಇಡೀ ಮುಸ್ಲಿಂ ಸಮುದಾಯವೂ ಸಹ ಇದನ್ನು ಸ್ವಾಗತಿಸಿದೆ ಎಂದು ಪ್ರಧಾನಿ ಹೇಳಿದರು
.
ನಾನು 10 ವರ್ಷಗಳ ಹಿಂದೆ ರಾಜಕೀಯ ರ‍್ಯಾಲಿಗಾಗಿ ಸಹರಾನ್‌ಪುರಕ್ಕೆ ಬಂದಾಗ, ದೇಶವು ದುಃಖದಲ್ಲಿ ಮುಳುಗಿತ್ತು. ನಾನು ದೇಶವನ್ನು ಹಾಳುಮಾಡುವುದಿಲ್ಲ ಎಂದು ಭರವಸೆ ನೀಡಿದ್ದೆ. ಅದರಂತೆಯೇ ನಡೆದುಕೊಂಡಿದ್ದೇವೆ ಎಂದು ಅವರು ಹೇಳಿದರು.

ಬಡವರಿಗೆ ಬಿಜೆಪಿ ಪಡಿತರ ನೀಡಿದೆ. ಇದನ್ನು ಮುಂದಿನ 5 ವರ್ಷ ಕೂಡ ಮುಂದುವರಿಸುವುದಾಗಿ ನಾವು ಭರವಸೆ ನೀಡುತ್ತೇವೆ ಎಂದು ಮೋದಿ ಹೇಳಿದರು.

ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ. ಹಲವು ದಶಕಗಳಲ್ಲಿ ಕಾಂಗ್ರೆಸ್‌ಗೆ ಸಾಧ್ಯವಾಗದ್ದನ್ನು ಬಿಜೆಪಿ ಸರ್ಕಾರ ಕೇವಲ 10 ವರ್ಷಗಳಲ್ಲಿ ಮಾಡಿದೆ. ಹಾಗಾಗಿ ಜೂನ್ 4 ರಂದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ದೇಶ ಹೇಳುತ್ತಿದೆ ಎಂದು ಮೋದಿ ಭರವಸೆ ವ್ಯಕ್ತಪಡಿಸಿದರು.

";