ಬಾಗಲಕೋಟೆ
ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ಬೆಳಗಾವಿ ಜಿಲ್ಲೆ ಯಕ್ಸಂಬಾದ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದ ನೂತನ ೫೪ನೇ ಶಾಖೆ ಉದ್ಘಾಟನೆ ನ.೨೦ರಂದು ನಡೆಯಲಿದೆ.
ಸಂಘದ ಸಹ ಸಂಸ್ಥಾಪಕರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ೫೧ನೇ ಜನ್ಮದಿನದ ನಿಮಿತ್ತ ಆರಂಭಗೊಳ್ಳಲಿರುವ ಶಾಖೆ ಉದ್ಘಾಟನೆಯನ್ನು ಗುಳೇದಗುಡ್ಡ ಒಪ್ಪತ್ತೇಶ್ವರ ಮಠದ ಪೂಜ್ಯ ಒಪ್ಪತ್ತೇಶ್ವರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಚಂದ್ರಕಾಂತ ಖೋತ, ಉಪಾಧ್ಯಕ್ಷ ಬಾಬುರಾವ ಮಾಳಿ ಇತರರು ಉಪಸ್ಥಿತರಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.