This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

Education NewsState News

ನೂರರ ಗಡಿ ದಾಟಿದ ಸೋಂಕಿತರು

8 ಜನ ಗುಣಮುತಖ, 22 ಹೊಸ ಪ್ರಕರಣ ದೃಡ

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ 8 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 22 ಕೊರೊನಾ ಪ್ರಕರಣಗಳು ಸೋಮವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13,994 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13,752 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ.

ಹೊಸದಾಗಿ ದೃಡಪಟ್ಟವರಲ್ಲಿ ಹುನಗುಂದ ತಾಲೂಕಿನಲ್ಲಿ 7, ಬಾಗಲಕೋಟೆ ಮತ್ತು ಮುಧೋಳದಲ್ಲಿ ತಲಾ 5, ಬೀಳಗಿ ಮತ್ತು ಬಾದಾಮಿಯಲ್ಲಿ ತಲಾ 2 ಹಾಗೂ ಜಮಖಂಡಿ ತಾಲೂಕಿನ ಒಬ್ಬರಲ್ಲಿ ಸೋಂಕು ದೃಡಪಟ್ಟಿದ್ದು, ಅವರನ್ನು ಸರಕಾರಿ, ಖಾಸಗಿ ಹಾಗೂ ಹೋಮ್ ಐಸೋಲೇಷನ್‍ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 3095 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 470450 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 452797 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 106 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 462 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.