This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local NewsState News

ಅಂತರ್ ಕಾಲೇಜ್ ದೇಶಭಕ್ತಿ ಗೀತೆ ಸ್ಪರ್ಧೆ

ಅಂತರ್ ಕಾಲೇಜ್ ದೇಶಭಕ್ತಿ ಗೀತೆ ಸ್ಪರ್ಧೆ

ವಿಜಯಪುರ,

ಇಂದಿನ ಒತ್ತಡದ ಜೀವನ ನಿವಾರಿಸಲು ಸಂಗೀತ ಮಹತ್ವದ ಪಾತ್ರ ವಹಿಸುತ್ತದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್. ಆಯುರ್ವೇದ ಮಹಾವಿದ್ಯಾಲ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಹೇಳಿದ್ದಾರೆ.

76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇದೇ ಮೊದಲ ಬಾರಿಗೆ ವಿಜಯಪುರ ಅಂತರ್ ಕಾಲೇಜು ದೇಶಭಕ್ತಿ ಗೀತೆ ಸ್ಪರ್ಧೆ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಗೀತಕ್ಕೆ ಮಾನಸಿಕ ಮತ್ತು ದೈಹಿಕ ರೋಗಗಳನ್ನು ಗುಣಪಡಿಸುವ ಶಕ್ತಿ ಇದೆ. ಹೀಗಾಗಿ ಸಂಗೀತದ ಕಡೆ ಗಮನ ಹರಿಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ. ಡಿ. ಎನ್. ಧರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸ್ಪರ್ಧೆಯಲ್ಲಿ ವೇದಾಂತ ಬಿಸಿಎ ಕಾಲೇಜಿನ ಸಾಕ್ಷಿ ಹಿರೇಮಠ ಪ್ರಥಮ, ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಾಳವಿಕ ಜೋಶಿ, ದ್ವಿತೀಯ ಹಾಗೂ ಬಿ.ಎಲ್.ಡಿಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಸುನಯನಾ ದೇಶಪಾಂಡೆ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ಪಾರಿತೋಷಕ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಸಂಗೀತ ವಿದ್ವಾಂಸರಾದ ಮುತ್ತುರಾಜ ಮದನಭಾವಿ ಮತ್ತು ಸುನಂದಾ ಘಾಟಗೆ ನಿರ್ಣಾಯಕರಾಗಿ ಪಾಲ್ಗೋಂಡರು. ಸಹ ಕಾರ್ಯದರ್ಶಿ ಡಾ. ವಿಜಯಲಕ್ಷಿ, ವಿಧ್ಯಾರ್ಥಿ ಸಂಘದ ಅಧ್ಯಕ್ಷೆ ಡಾ. ಸೀತಾ ಬಿರಾದಾರ, ಸಾಂಸ್ಕೃತಿಕ ವಿಭಾಗದ ಸಂಯೋಜಕಿ ಡಾ. ಸುಮಾ ಮತ್ತು ಡಾ. ದಾಮೋದರ ಉಪಸ್ಥಿತರಿದ್ದರು. ಡಾ. ಸುಮಾ ಕಗ್ಗೋಡ ವಂದಿಸಿದರು.
ಈ ಸ್ಪರ್ಧೆಯಲ್ಲಿ ನಗರದ 20ಕ್ಕೂ ಹೆಚ್ಚು ಮಹಾವಿದ್ಯಾಲಗಳ ಒಟ್ಟು 40 ಸ್ಪರ್ಧಾಳುಗಳು
ಭಾಗವಹಿಸಿದ್ದರು.

Nimma Suddi
";