ಸಾಕ್ಷರತಾ ಧ್ವಜಾರೋಹಣ ನೆರವೇರಿಸಿದ ಡಿಸಿ ಜಾನಕಿ
ಬಾಗಲಕೋಟೆ
ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಧಿಕಾರಿಗಳು ಆಗಿರುವ ಜಿಲ್ಲಾ ಲೋಕ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಜಾನಕಿ ಕೆ.ಎಂ. ಗುರುವಾರ ಸಾಕ್ಷರತಾ ಧ್ವಜಾರೋಣ ನೇರವೇರಿಸಿದರು.
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣದ ನಂತರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸಾಕ್ಷರತಾ ಪ್ರಮಾಣ ವಚನವನ್ನು ಬೋಧಿಸಿದರು.
ಕರ್ನಾಟಕವನ್ನು ಸಾಕ್ಷರ ಸಮೃದ್ದ, ಸುಸ್ಥಿರ ಮತ್ತು ಅಭಿವೃದ್ದಿ ನಾಡನ್ನಾಗಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದೆ. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರ ಮನೆ ಹಾಗೂ ಮನವನ್ನು ತಲುಪಿ, ಮಹಿಳೆ ಮತ್ತು ಶಿಕ್ಷಣ ವಂಚಿತ ವರ್ಗದವರ ಕಲಿಕೆಗಾಗಿ ಜನಾಂದೋಲನಗೊಳ್ಳಲು ಕಾಯಾ, ವಾಚಾ, ಮನಸಾ ಪಾಲ್ಗೊಂಡು ಸೇವೆ ಸಲ್ಲಿಸುವ ಸಂಕಲ್ಪ ಮಾಡಿಕೊಂಡಿದ್ದೇನೆ ಎಂದು ಬೋಧಿಸಿದರು.
ಗ್ರಾಮ ಪಂಚಾಯತಿ ಸಂಪೂರ್ಣ ಸಾಕ್ಷರತಾ ಕಾರ್ಯಕ್ರಮ, ಉಲ್ಲಾಸ್ ನವಭಾರತ ಸಾಕ್ರತಾ ಕಾರ್ಯಕ್ರಮದಲ್ಲಿ ಕಲಿತ ನವಸಾಕ್ಷರರಿಗೆ ಪ್ರಮಾಣ ಪತ್ರಗಳನ್ನು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ವಿತರಿಸಿದರು. ಈ ಸಂದರ್ಬದಲ್ಲಿ ಸಾಕ್ಷರತಾ ಪ್ರಚಾರದ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.
ಅಲ್ಲದೇ ತಾಲೂಕಾವಾರು ಸಾಕ್ಷರತಾ ಕಾರ್ಯಕ್ರಮದ ಪ್ರಮಾಣ ಪತ್ರಗಳನ್ನು ಸಹ ನೀಡಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಶಿಕ್ಷಣ ಇಲಾಖೆಯ ಉಪ ಸಮನ್ವಯಾಧಿಕಾರಿ ಸಿ.ಆರ್.ಓಣಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಚ್.ಜಿ.ಮಿರ್ಜಿ, ಕಾರ್ಯಕ್ರಮ ಸಹಾಯಕಿ ಎಸ್.ಎನ್.ಕಲಬಿರ್ಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.